ವೀರಾಜಪೆಟೆ, ಆ. ೧೬: ಆಧುನಿಕತೆ ಹಾಗೂ ನಗರೀಕರಣ ವೃದ್ಧಿಯಾದಂತೆಲ್ಲ ಜನಸಂದಣಿ ಹೆಚ್ಚಾಗುತ್ತಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಮಾರ್ಗಗಳನ್ನು ಹಾಗೂ ಸುಸೂತ್ರವಾಗಿ ಪ್ರಯಾಣಿಸಲು ಹೊಸ ಬಸ್‌ಗಳನ್ನು ಈ ಭಾಗಕ್ಕೆ ಕಲ್ಪಿಸಲಾಗಿದೆ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹೇಳಿದರು.
ವೀರಾಜಪೇಟೆ ನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ ೮ ಹೊಸ ಬಸ್‌ಗಳ ಉದ್ಘಾಟನೆ ಹಾಗೂ ೮ ಹೊಸ ಮಾರ್ಗಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು,
ಬಸ್‌ನ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕು. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿದ್ದು ಇದರಿಂದ ನಾಡಿನ ಮಹಿಳೆಯರಿಗೆ ಅನುಕೂಲವಾಗಿದೆ. ವೇಗವಾಗಿ ಬೆಳೆಯುತ್ತಿರುವ ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ೭ನೇ ಪುಟಕ್ಕೆ ಮೊದಲ ಪುಟದಿಂದ) ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆ ಅನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ಎಂಟು ಹೊಸ ಬಸ್‌ಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಇದರ ಸದುಪಯೋಗಪಡೆದು
ಕೊಳ್ಳುವಂತಾಗಬೇಕು ಎಂದರು. ಈ ಬಸ್‌ಗಳು ವೀರಾಜಪೇಟೆ ತಾಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಲಿವೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಜಾನ್ಸನ್, ವೀರಾಜಪೇಟೆ ಪುರಸಭೆಯ ಮುಖ್ಯ ಅಧಿಕಾರಿ ನಾಚಪ್ಪ, ವೀರಾಜಪೇಟೆ ಪುರಸಭೆಯ ಉಪಾಧ್ಯಕ್ಷೆ ಫಸಿಹಾ ತಬ್ಸುಂ, ಹಾಗೂ ಸದಸ್ಯರು, ತಹಶೀಲ್ದಾರ್ ಪಿ.ಎಸ್.ಪ್ರವೀಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.