ಬೆಂಗಳೂರು, ಆ. ೧೬: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (೩೮), ಪತ್ನಿ ಸಂಗೀತಾ (೩೩) ಮಿತೇಶ್ (೮), ವಿಹಾನ್ (೫) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಕೂಡ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರೌಂಡ್ ಫ್ಲೋರ್ನಲ್ಲಿರುವ ಗೋಡೌನ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಮಹಡಿಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ.