ಸೋಮವಾರಪೇಟೆ, ಆ. ೧೬: ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾಗಿರುವ ಘಟನೆ ಸಮೀಪದ ಮಸಗೋಡು ಜಂಕ್ಷನ್‌ನಲ್ಲಿ ಇಂದು ಸಂಜೆ ಸಂಭವಿಸಿದೆ.

ಪಟ್ಟಣದಿAದ ಮಸಗೋಡು, ನೇಗಳ್ಳಿ, ಸೀಗೇಹೊಸೂರು ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಮಸಗೋಡು ಗ್ರಾಮದಿಂದ ಪಟ್ಟಣಕ್ಕೆ ಆಗಮಿಸುತ್ತಿದ್ದ, ನೇಗಳ್ಳೆ ಗ್ರಾಮದ ಯುವಕ ಚಾಲಿಸುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನ ಬಸ್‌ನ ಮುಂಭಾಗದ ಕೆಳಭಾಗಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ.

ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.