ನಾಪೋಕ್ಲು, ಆ. ೧೭: ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖ ವಾದದÀÀÄ್ದ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು. ಸಮೀಪದ ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಗೊAಡ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ತರಗತಿ ಉದ್ಘಾಟಸಿ ಅವರು ಮಾತನಾಡಿದರು.

ಎಲ್.ಕೆ.ಜಿ., ಯು.ಕೆ.ಜಿ. ಯನ್ನು ಪ್ರಾರಂಭಿಸಲಾಗಿದ್ದು, ಗ್ರಾಮೀಣ ಭಾಗದ ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಎಲ್.ಕೆ.ಜಿ., ಯು.ಕೆ.ಜಿ. ಕೊಠಡಿಯನ್ನು ಉದ್ಘಾಟಿಸಿದ ದಾನಿ ಡಾ. ದೇವದಾಸ್ ಮಾತನಾಡಿ, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು.

ಪೂಜಾ ಕಾರ್ಯವನ್ನು ಹರೀಶ್ ಭಟ್ ನೆರವೇರಿಸಿದರು. ಈ ಸಂದರ್ಭ ಸ್ಥಳ ದಾನಿಗಳಾದ ಕುಲ್ಲೇಟಿರ ಚಿನ್ನವ್ವ, ದಾನಿಗಳಾದ ಡಾ. ದೇವದಾಸ್ ಅವರುಗಳನ್ನು ಅಂಗನವಾಡಿ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದ ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ಬೇಬ, ಮಾಚೆಟ್ಟಿರ ಕುಶು ಕುಶಾಲಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರಸನ್ನ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಇನ್ನಿತರರು ಉಪಸ್ಥಿತರಿದ್ದರು.

ಪುಟಾಣಿ ವಿದ್ಯಾರ್ಥಿ ವಿಹಾನ್ ಪೊನ್ನಪ್ಪ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ ಸ್ವಾಗತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ, ಮೇಲ್ವಿಚಾರಕಿ ಶೀಲಾ ನಿರೂಪಿಸಿದರು. ಅಂಗನವಾಡಿ ಶಿಕ್ಷಕಿ ಭಾಗ್ಯವತಿ ವಂದಿಸಿದರು.