ವರದಿ-ಈಶಾನ್ವಿ
ವೀರಾಜಪೇಟೆ, ಆ. ೧೭: ರಾಜ್ಯದಾದ್ಯಂತ ಪ್ರಖ್ಯಾತವಾಗಿರುವ ವೀರಾಜಪೇಟೆಯ ಐತಿಹಾಸಿಕ ಗೌರಿ ಗಣೇಶ ಉತ್ಸವ ಕಾನೂನು ಪಾಲನೆ ಮಾಡುವುದರೊಂದಿಗೆ ವಿಜ್ರಂಭಣೆಯಿAದ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಾಮರಸ್ಯದ ಹಬ್ಬವಾಗಿ ಆಚರಣೆ ಆಗಬೇಕೆಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಕರೆ ನೀಡಿದರು.
ವೀರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವೀರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಪೊನ್ನಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತೀ ಮುಖ್ಯವಾಗಿ ಪರಿಸರ ಕಾಳಜಿಯೊಂದಿಗೆ ಗಣೇಶೋತ್ಸವವನ್ನು ಆಚರಿಸಬೇಕು. ಪ್ರಕೃತಿಗೆ ಹಾನಿಕರವಾದ, ಪ್ರಾಣಿ-ಪಕ್ಷಿಗಳಿಗೆ ಹಾಗೂ ಪರಿಸರಕ್ಕೆ ಮಾರಕವಾಗಬಹುದಾದಂತಹ ಯಾವುದೇ ಬಣ್ಣವಾಗಲಿ, ಪೇಪರ್ ವಸ್ತುಗಳನ್ನಾಗಲಿ ಬಳಸದೇ ಗಣೇಶೋತ್ಸವವನ್ನು ಆಚರಿಸಬೇಕು.
ನಾಡಿನ ಪರಂಪರೆ, ಸಂಸ್ಕöÈತಿ ಹಾಗೂ ಕಲೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ ವೀರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ ಕೆಲಸ ಕಾರ್ಯಗಳನ್ನು ಮತ್ತಷ್ಟು ಅದ್ಧೂರಿಯಾಗಿ ಮಾಡುವಂತೆ ಸಲಹೆ ನೀಡಿದ ಶಾಸಕರು, ತಾನು ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಉತ್ಸವದ ಶೋಭಾಯಾತ್ರೆಯಲ್ಲಿ ಮಂಟಪಗಳು ಚಲಿಸುವ ಮುಖ್ಯ ರಸ್ತೆ ಒಳಗೊಂಡAತೆ ÀÄಂಡಿ ಬಿದ್ದ ನಗರದ ರಸ್ತೆಗಳನ್ನು ದುರಸ್ತಿ ಪಡಿಸುವುದು ಸೇರಿದಂತೆ ಪಟ್ಟಣದಲ್ಲಿ ಮತ್ತು ಗಡಿಯಾರಕಂಬಕ್ಕೆ ವಿದ್ಯುತ್ ಅಲಂಕಾರ ಮಾಡುವಂತೆ ಮುಖ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಬ್ಬರದ ಡಿಜೆ ಶಬ್ದದಿಂದ ಹಿರಿಯರು ಮತ್ತು ಪುಟ್ಟ ಮಕ್ಕಳಿಗೆ ಅಪಾಯವಾಗುವ ಸಾಧ್ಯತೆಗಳಿರುತ್ತದೆ ಜೊತೆಗೆ ಸುಂದರ ಪರಿಸರ ಹೊಂದಿರುವ ಕೊಡಗಿನಲ್ಲಿ ಪರಿಸರ ಮಾಲಿನ್ಯವಾಗದಂತೆ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಸಭೆಯಲ್ಲಿ ಹಾಜರಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರಘುರಾಮ್ ಮಾತನಾಡಿ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶ ಪಾಲಿಸುವ ಮೂಲಕ ಪರಿಸರವನ್ನು ಕಾಪಾಡಬೇಕಿದೆ; ಡಿಜೆ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದರು. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ನಿರ್ಮಿಸಿದ ಗಣಪನ ವಿಗ್ರಹಗಳನ್ನು ಉತ್ಸವದಲ್ಲಿ ಬಳಸದಂತೆ ಕೋರಿದರು. ಪರಿಸರಕ್ಕೆ ಪೂರಕವಾದ ನೈಸರ್ಗಿಕ ಬಣ್ಣ ಮತ್ತು ಮಣ್ಣಿನ ಗಣಪ ಬಳಸುವಂತೆ ತಿಳಿಸಿದರು.
ಪೊಲೀಸ್ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಮಾತನಾಡಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಈಗಾಗಲೇ ಇಲಾಖೆಯಿಂದ ಸಮಿತಿಗಳೊಂದಿಗೆ ಸಭೆ ನಡೆಸಲಾಗಿದೆ. ಸಮಿತಿಗಳು ಕಾನೂನಿನ ನಿಯಮ ಪಾಲನೆ ಮಾಡಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು,
ಐತಿಹಾಸಿಕ ಜನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಬರೀಶ್ ಶೆಟ್ಟಿ ಮಾತನಾಡಿ, ವೀರಾಜಪೇಟೆ ನಗರದ ಐತಿಹಾಸಿಕ ಗೌರಿ ಗಣೇಶ ಹಬ್ಬವು ಎಂದಿನAತೆ ಅದೇ ಹಳೆಯ ವೈಭವದೊಂದಿಗೆ ನಡೆಯಲಿದೆ. ಇದಕ್ಕೆ ಎಲ್ಲರ ಸಹಕಾರಬೇಕು ಎಂದರು.
ಟಿ.ಪಿ. ಕೃಷ್ಣ ಮಾತನಾಡಿ ಇಲಾಖೆಯಿಂದ ವಿಪರೀತ ನಿಯಮ ನಿಬಂಧನೆಗಳನ್ನು ಒತ್ತಾಯವಾಗಿ ಹೇರಿಕೆ ಮಾಡುವುದು ಬೇಡ. ವೀರಾಜಪೇಟೆಯಲ್ಲಿ ಗೌರಿಗಣೇಶೋತ್ಸವ ಶತಮಾನಗಳಿಂದ ಶಾಂತಿಯುತವಾಗಿ ಸೌಹಾರ್ದತೆಯಿಂದ ಆಚರಿಸಲಾಗುತ್ತಿದೆ. ಕಟ್ಟುನಿಟ್ಟಿನ ಕಾನೂನುಗಳನ್ನು ಹೇರಿದರೆ ಹಬ್ಬವನ್ನು ಆಚರಿಸುವುದಾದರು ಹೇಗೆ ಎಂದು ಪ್ರಶ್ನಿಸಿದ ಅವರು ಆಚರಣೆಗೆ ಮುಕ್ತ ಅವಕಾಶ ಇರಲಿ. ಸಮಿತಿಗಳಿಗೆ ಹೊರೆಯಾಗದಂತೆ ಶಾಸಕರು ಗಮನ ಹರಿಸಿ ಕ್ರಮ ಕೈಗೊಳ್ಳಬೇಕೆಂದರು.
ಬಸವೇಶ್ವರ ದೇವಾಲಯ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಕಾಮತ್ ಸೇರಿದಂತೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಪ್ರವೀಣ್, ಪುರಸಭೆ ಮುಖ್ಯಾಧಿಕಾರಿ ಹಾಗೂ ಜನೋತ್ಸವ ಸಮಿತಿ ಕಾರ್ಯದರ್ಶಿ ನಾಚಪ್ಪ, ಪುರಸಭೆ ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ಸ್ಥಾಯಿ ಸಮಿತಿ ಅಧ್ಯಕ್ಷ ಜಲೀಲ್, ಪುರಸಭೆಯ ಸದಸ್ಯ ರಜನಿಕಾಂತ್, ಜೂನಾ ಸುನೀತ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಲೋಕೋಪಯೋಗಿ ಸಹಾಯಕ ಅಭಿಯಂತರ ಸತೀಶ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್, ಪೊಲೀಸ್ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್, ನಗರದ ೨೨ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.