ಮಡಿಕೇರಿ, ಆ. ೧೭:-ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಮತ್ತು ಅಡಿಕೆ ಬೆಳೆಗಳಿಗೆ ರೈತ ರು ನೋಂದಾಯಿಸಿಕೊಳ್ಳಲು ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಸರ್ಕಾರದ ಆದೇಶದಂತೆ ತಾ. ೩೦ರವರೆಗೆ ಬೆಳೆ ವಿಮೆ ಪ್ರೀಮಿಯಂ ಪಾವತಿ ದಿನಾಂಕ ವಿಸ್ತರಿಸಲಾಗಿದೆ. ರೈತರು ಇದನ್ನು ಸದುಪಯೋಗ ಪಡೆದುಕೊ ಳ್ಳುವುದು ಹಾಗೂ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆ ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗಿರೀಶ್ ತಿಳಿಸಿದ್ದಾರೆ