ಸಿದ್ದಾಪುರ ಆ೧೭ ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಸಿದ್ದಾಪುರದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು ಇದೇ ರೀತಿ ಮಳೆ ಮುಂದುವರಿದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಕಂಡು ಬಂದಿದೆ. ಸಿದ್ದಾಪುರದಲ್ಲಿ ಸುರಿದ ಮಳೆಯಿಂದಾಗಿ ಸಂತೆ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಸಮಸ್ಯೆ ಎದುರಾಯಿತು. ಎಡೆಬಿಡದೆ ಸುರಿದ ಮಳೆ ಯಿಂದಾಗಿ ಸಂತೆ ಮಾರುಕಟ್ಟೆ ಕೆಸರುಮಯವಾಗಿತ್ತು.
ಗ್ರಾಹಕರು ತರಕಾರಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಖರೀದಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.