ÀÆಡಿಗೆ, ಆ. ೧೯: ಶಾರ್ಟ್ ಸರ್ಕ್ಯೂಟ್ನಿಂದ ಎಟಿಎಂ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಬ್ಬಾಲೆಯಲ್ಲಿ ನಡೆದಿದೆ.
ಅಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿಯ ಇಂಡಿಯಾ ಬ್ಯಾಂಕ್ನ ಎ.ಟಿ.ಎಂ.ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಕೆಲ ವಸ್ತುಗಳು ಬೆಂಕಿಗಾಹುತಿಯಾಗಿವೆ. ತಕ್ಷಣ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಕುಶಾಲನಗರ ಅಗ್ನಿಶಾಮಕ ದಳ ಸಿಬ್ಬಂದಿ ಸ್ಧಳಕ್ಕೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.