ಸಿದ್ದಾಪುರ, ಆ. ೧೯: ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿದ್ದ ಆನೆಗಳನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ತಿತಿಮತಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಳ್ಳಿ, ಮೈಲಾಪುರ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ಕಾರ್ಯಚರಣೆ ನಡೆಸಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾಡಿಗೆ ಓಡಿಸಿದರು. ಈ ಸಂದರ್ಭದಲ್ಲಿ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಕಾಡಾನೆಗಳು ಕಾರ್ಯಾಚರಣೆ ತಂಡವನ್ನು ಸುತ್ತಾಡಿಸಿದವು. ಮಳೆ ನಡುವೆ ಕಾರ್ಯಾಚರಣೆ ನಡೆಯಿತು. ಮರಿಯಾನೆಗಳು ಸೇರಿದಂತೆ ೨೫ಕ್ಕೂ ಅಧಿಕ ಕಾಡಾನೆಗಳು ಕಂಡುಬAದವು. ಎಂದು ಕಾರ್ಯಾಚರಣೆ ತಂಡದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ರೇಡಿಯೋ ಕಾಲರ್ ಅಳವಡಿಸಿದ ಆನೆಗಳೂ ಕಂಡುಬAದಿವೆ. ಇವುಗಳನ್ನು ಒಟ್ಟುಗೂಡಿಸಿದ ಕಾರ್ಯಾಚರಣೆ ತಂಡವು ಮಾಲ್ದಾರೆಯ ಮೀಸಲು ಅರಣ್ಯಕ್ಕೆ ಅಟ್ಟಿದೆ.
ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆಯ ಮೇರೆಗೆ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾರ್ಗದರ್ಶನದಲ್ಲಿ, ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ, ಗಸ್ತು ಅರಣ್ಯಪಾಲಕ ರಾಜೇಶ್, ಆರ್.ಆರ್.ಟಿ. ಸಿಬ್ಬಂದಿ ರಂಜಿತ್, ಧನು, ಶಂಕರ್, ಪ್ರದೀಪ್, ರೋಶನ್, ಪ್ರಜ್ವಲ್, ಪ್ರವೀಣ್, ಅರುಣ ಮತ್ತು ಶಶಿ ಭಾಗವಹಿಸಿದ್ದರು.