ಮಡಿಕೇರಿ, ಆ. ೧೯: ಜಾತ್ಯಾತೀತ ಪಕ್ಷ ಎಂದು ಹೇಳಿಕೊಳ್ಳುತ್ತಾ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ಗೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಹೇಳಿದೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರ ಘಟಕ ಎಂಬುದು ಇರುವುದೇ ಒಂದು ಹಾಸ್ಯಸ್ಪದವಾಗಿದೆ. ಜಿಲ್ಲೆಯ ಎರಡು ವಿದ್ಯಾವಂತ ಮತ್ತು ಯುವ ಶಾಸಕರುಗಳು ಹಿಂದೆAದು ಕಂಡು ಕೇಳರಿಯದ ರೀತಿಯಲ್ಲಿ ಅನುದಾನವನ್ನು ತಂದು ೨ ಕ್ಷೇತ್ರಗಳಲ್ಲಿ ಅಭಿವೃದ್ದಿ ಮಾಡುತ್ತಿದ್ದು, ಇವುಗಳನ್ನು ಸಹಿಸದೆ ಅಲ್ಪಸಂಖ್ಯಾತರ ಅಭಿವೃದ್ದಿಯ ಬಗ್ಗೆ ಅರಿವಿಲ್ಲದೆ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಆರೋಪ ಮಾಡುತ್ತಿದೆ. ಡಾ. ಮಂತರ್ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ೧೮೦೦ ಕೋಟಿ ಅನುದಾನ ತಂದಿದ್ದು, ಅಲ್ಪಸಂಖ್ಯಾತರೆ ಹೆಚ್ಚಿಗೆ ವಾಸವಿರುವ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಕೋಟಿ ಇಪ್ಪತ್ತೆöÊದು ಲಕ್ಷದ ಕಾಮಗಾರಿ, ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಎರಡು ಕೋಟಿ ಕಾಮಗಾರಿ ಮಾಡಲಾಗಿದೆ.
ಎ.ಎಸ್. ಪೊನ್ನಣ್ಣ ಅವರು ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ೧೨೬೬ ಕೋಟಿ ತಂದಿದ್ದು, ನಿರಾಶ್ರಿತರಿಗೆ ೧೩೯೫ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ೧೫.೭೬ ಕೋಟಿ ಅನುದಾನ ಬಂದಿದ್ದು, ಇನ್ನು ವಕ್ಫ್ ಇಲಾಖೆಯಿಂದ ಮಸೀದಿ ಮತ್ತು ಮದರಸಾಗಳಿಗೆ ಮತ್ತು ಸ್ಮಶಾನಗಳ ಅಭಿವೃದ್ದಿಗಳಿಗೆ ೪ ಕೋಟಿ ಅನುದಾನ ಅನುಮೋದನೆಗೊಳ್ಳಲು ಪ್ರಗತಿಯಲ್ಲಿದೆ. ಇದಲ್ಲದೇ ಅಲ್ಪಸಂಖ್ಯಾತರು ಹೆಚ್ಚಿಗೆ ಇರುವ ನಾಪೋಕ್ಲು ವ್ಯಾಪಿಯಲ್ಲಿ ೩ ಕೋಟಿ ಮತ್ತು ಎಮ್ಮೆಮಾಡು ವ್ಯಾಪ್ತಿಯಲ್ಲಿ ೨.೧೦ಕೋಟಿ ಕಾಮಗಾರಿಗಳು ನಡೆದಿವೆ. ಅಲ್ಲದೇ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾAತರಿರುವ ಎಲ್ಲಾ ಊರುಗಳಲ್ಲೂ ಒಂದಲ್ಲಾ ಒಂದು ಕಾಮಗಾರಿಗಳು ನಡೆದಿವೆ ಎಂದರು.
ವಕ್ಫ್ ಅಧ್ಯಕ್ಷ ಸ್ಥಾನದ ವಿಷಯದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಹೇಳಿಕೆ ನೀಡಿರುವಂತೆ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಅಧಿಕ ಸಂಖ್ಯೆಯಲ್ಲಿರುವುದರಿAದ ಅಭಿಪ್ರಾಯ ಸಂಗ್ರಹಣೆಗಾಗಿ ಸಭೆಗಳನ್ನು ಮಾಡಲಾಗಿದೆ. ಅಭಿಪ್ರಾಯ ಸಂಗ್ರಹಿಸಿ ೨ ಶಾಸಕರಿಗೆ ಮತ್ತು ಜಿಲ್ಲಾಧ್ಯಕ್ಷರ ಮುಖಾಂತರ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡಲಾಗಿದೆ. ಶೀಘ್ರದಲ್ಲೇ ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತದೆ. ಸ್ಥಳೀಯವಾಗಿ ಹಲವು ಹುದ್ದೆಗಳನ್ನು ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ನೀಡಿದೆ.
ಅಲ್ಲದೇ ಪಕ್ಷದಲ್ಲಿ ರಾಜ್ಯ ಮಟ್ಟದ ನಾಮ ನಿರ್ದೇಶಿತ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಈಗಾಗಲೇ ಅವುಗಳ ಪಟ್ಟಿಯನ್ನು ರಾಜ್ಯ ಮಟ್ಟಕ್ಕೆ ಕಳುಹಿಸಲಾಗಿದೆ. ಅತೀ ಶೀಘ್ರದಲ್ಲೇ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹನೀಫ್ ತಿಳಿಸಿದರು. ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯದ್ ಭಾವ ಮಾತನಾಡಿ ಜೆಡಿಎಸ್ ಜಿಲ್ಲೆಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೆಣಗಾಡುತ್ತಿರುವ ಪಕ್ಷವಾಗಿದೆ ಎಂದು ಟೀಕಿಸಿದರು. ನಾಪೋಕ್ಲು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎA. ಉಮ್ಮರ್ ಮಾತನಾಡಿ ಕಾಂಗ್ರೆಸ್ನಿAದ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಜೆಡಿಎಸ್ ವೃಥಾ ಆರೋಪ ಮಾಡುತ್ತಿದೆ ಎಂದರು. ವೀರಾಜಪೇಟೆ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್ ಮಾತನಾಡಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಅಲ್ಪಸಂಖ್ಯಾತರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ಕುಶಾಲನಗರ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ರಜಾ಼ಕ್, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪೀಟರ್ ಉಪಸ್ಥಿತರಿದ್ದರು.