ಮಡಿಕೇರಿ, ಆ. ೨೦ : ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆ ಕಟ್ಟಡದಲ್ಲಿರುವ ದಸರಾ ಸಮಿತಿ ಕಚೇರಿಯಲ್ಲಿ ಗಣಪತಿ ಹೋಮ ಹಾಗೂ ಪೂಜೆಯನ್ನು ದಸರಾ ಸಮಿತಿ ವತಿಯಿಂದ ಏರ್ಪಡಿಸಲಾಗಿತ್ತು. ವಿಜಯ ವಿನಾಯಕ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀಕೃಷ್ಣ ಉಪಾಧ್ಯಾ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಹೋಮ ಹಾಗೂ ಪೂಜೆಯೊಂದಿಗೆ ದಸರಾ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ದಸರಾ ಸಮಿತಿ ಅಧ್ಯಕ್ಷರಾದ ಪಿ. ಕಲಾವತಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಜೈನಿ, ಖಜಾಂಚಿ ಸಬಿತಾ, ಗೌರವ ಕಾರ್ಯದರ್ಶಿ ರಮೇಶ್, ಕಾರ್ಯದರ್ಶಿ ಕಾನಹಿತ್ಲು ಮೊಣ್ಣಪ್ಪ, ದಶಮಂಟಪ ಸಮಿತಿ ಅಧ್ಯಕ್ಷ ಹರೀಶ್ ಅಣ್ವೇಕರ್ ಸೇರಿದಂತೆ ದಸರಾ ¸ಡÀಮಿತಿ ಪದಾಧಿಕಾರಿಗಳು, ಉಪ ಸಮಿತಿಗಳ ಅಧ್ಯಕ್ಷರುಗಳು ಮತ್ತಿತರರು ಹಾಜರಿದ್ದರು.