ಸುಳ್ಯ: ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ (ರಿ.) ಮತ್ತು ರೇಂಜರ್ಸ್ ಅಂಡ್ ರೋವರ್ಸ್ ಘಟಕದ ವತಿಯಿಂದ ಮಡಿಕೇರಿ ತಾಲೂಕಿನ ಭಾಗಮಂಡಲದ ಕೋಪಟ್ಟಿ ಗ್ರಾಮದ ಪೊಡÀೆÆÃಳನ ಕುಟುಂಬದ ಮುಕ್ಕಾಟಿಗುತ್ತು ಹೊಲದಲ್ಲಿ 'ಭತ್ತದ ಬದುಕು' ಎಂಬ ಕೆಸರುಗದ್ದೆ ಕ್ರೀಡಾಕೂಟಗಳು, ನೇಜಿ ನೆಡುವುದು ಮತ್ತು ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪೊಡÀÉÆÃಳನ ಕುಟುಂಬದ ಹಿರಿಯರಾದ ನಾಟಿ ವೈದ್ಯೆ ನೀಲಮ್ಮ ಪಿ.ಎನ್. ಉದ್ಘಾಟಿಸಿದರು.
ಪ್ರಕೃತಿಯೊಡನೆ ನಂಟು ಬೆಸೆಯುವ ಉದ್ದೇಶದಿಂದ ವಿದ್ಯಾರ್ಥಿಗಳು ಹಳ್ಳಿಯ ರೈತರ ಮಾರ್ಗದರ್ಶನದಲ್ಲಿ ಭತ್ತದ ತಯಾರಿ, ಗದ್ದೆ ಸಿದ್ಧತೆ ಮತ್ತು ನಾಟಿ ವಿಧಾನವನ್ನು ಅನುಭವಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಂದಚೇರಿ ಚೆಟ್ಟಿಮಾನಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಿನೇಶ್ ಪಿ.ಬಿ ಮಾತನಾಡಿ, "ಪ್ರಕೃತಿಯೊಡನೆ ಬದುಕುವ ಕಲಿಕೆ, ಕೃಷಿ ಸಂಸ್ಕೃತಿಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರÀದ್ದಾಗಿದೆ. ಭತ್ತವು ಕೇವಲ ಆಹಾರವಲ್ಲ, ನಮ್ಮ ಬದುಕಿನ ಶಕ್ತಿ ಎಂದರು.
ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ನಾಟಿವೈದ್ಯೆ ನೀಲಮ್ಮ, ಕಾರ್ಯಕ್ರಮ ಆಯೋಜನೆಗೆ ಸಂಪೂರ್ಣ ಸಹಕರಿಸಿದ ಭತ್ತದ ಕೃಷಿಕರಾದ ದಿನೇಶ್ ಪಿ.ಬಿ, ಪೊಡÀÉÆÃಳನ ಕುಟುಂಬದ ನಾಣಯ್ಯ ನಂಜಪ್ಪ ಮತ್ತು ಗಿರೀಶ್ ನಂಜಪ್ಪ ಅವರುಗಳನ್ನು ಸಾಂಪ್ರದಾಯಿಕ ಶೈಲಿಯಲ್ಲಿ ಮುಟ್ಟಾಳೆ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ನಂತರ ಕೆಸರು ಗದ್ದೆಯ ಹಲವಾರು ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ನೇಚರ್ ಕ್ಲಬ್ ಸಂಯೋಜಕರಾದ ಕುಲದೀಪ್ ಪೆಲ್ತಡ್ಕ ಪ್ರಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿ, ಮನಸ್ವಿ ಪ್ರಾರ್ಥಿಸಿ, ಕ್ಲಬ್ ಕಾರ್ಯದರ್ಶಿ ಅಕ್ಷತಾ ವಂದಿಸಿದರು. ಕಾರ್ಯಕ್ರಮದ ನೆನಪಿಗಾಗಿ ಒಂದು ತೆಂಗಿನ ಗಿಡವನ್ನು ನೆಡಲಾಯಿತು.
ನೆಹರು ಮೆಮೋರಿಯಲ್ ಕಾಲೇಜಿನ ರೇಂಜರ್ ಅಂಡ್ ರೋವರ್ ಘಟಕದ ಅಧಿಕಾರಿಗಳಾದ ಉಮೇಶ್ ಮತ್ತು ಪಲ್ಲವಿ, ಮಡಿಕೇರಿ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಅಶೋಕ್ ಬೊಳುಗಲ್ಲು, ಎನ್.ಎಂ.ಸಿ. ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕೃತಿಕಾ, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಜಿತೇಶ್, ಇತಿಹಾಸ ಉಪನ್ಯಾಸಕರಾದ ಲತೀಶ್, ಕಾಲೇಜು ಕಚೇರಿಯ ಪವನ್ ಹಾಗೂ ವಿದ್ಯಾರ್ಥಿಗಳ ಪೋಷಕರು ಮತ್ತು ಊರಿನ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು ವೀರಾಜಪೇಟೆ: ವೀರಾಜಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಗೋಣಿಕೊಪ್ಪ ವಲಯದ ಮಾಯಮುಡಿ ಕಾರ್ಯ ಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಲಯ ಅರಣ್ಯ ಅಧಿಕಾರಿ ಸಚಿನ್ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿAದ ಶುದ್ಧವಾದ ಗಾಳಿ-ನೀರು ಸಿಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್, ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಮುಖ್ಯ ಶಿಕ್ಷಕಿ ಜಯಮ್ಮ, ಮೀನಾಕ್ಷಿ ಹಾಜರಿದ್ದರು.
ಶಾಲೆಯ ಸಹ ಶಿಕ್ಷಕಿ ಸಹನ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳಾದ ಬಿಂದು, ಮೇರಿ, ಶಶಿ, ಸೇವಾ ಪ್ರತಿನಿಧಿ ಪುಷ್ಪಾ, ಶಾಲಾ ಮಕ್ಕಳು ಇದ್ದರು. ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು. ಶಾಲಾ ಶಿಕ್ಷಕರಾದ ರಾಗಿಣಿ ಡಿ.ಯು, ಸತ್ಯ ಎಂ.ಟಿ, ಲೀಲಾ ಎಂ.ಕೆ, ಸುಮಾ, ಪುಷ್ಪಾ, ಲಾವಣ್ಯ ಇದ್ದರು.
ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜ ನೆಯ ಕಾನ್ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರುಗಳು ಕಾನ್ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಬೆಳೆದಿದ್ದ ಕಾಡು ಗಿಡ-ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಶ್ರೀ ಕ್ಷೇ.ಧ.ಗ್ರಾ.ಯೋ. ವತಿಯಿಂದ ವಾರ್ಷಿಕ ಕಾರ್ಯಕ್ರಮಗಳಲ್ಲಿ ಒಂದಾದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಕಾನ್ಬೈಲ್ ಸರಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷೆ ಭವ್ಯ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವ-ಸಹಾಯ ಸಂಘಗಳಾದ ಜನನಿ, ಮೂಕಾಂಬಿಕ, ಅನ್ನಪೂರ್ಣ, ಶ್ರೀ. ಸರಸ್ವತಿ, ನೇತಾಜಿ ಹಾಗೂ ಪರಮೇಶ್ವರ ಸಂಘಗಳ ಪ್ರಂಬಧಕರು ಹಾಗೂ ಸಂಘದ ಸದಸ್ಯರುಗಳು ಶ್ರಮದಾನ ಕೈಗೊಂಡರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಉಪಾಧ್ಯಕ್ಷೆ ಗೀತಾ, ಒಕ್ಕೂಟ ಕಾರ್ಯದರ್ಶಿ ಪುಷ್ಪಲತಾ, ಸೇವಾ ಪ್ರತಿನಿಧಿ ಯಶೋಧ, ಶಾಲಾ ಸಮಿತಿ ಸದಸ್ಯರುಗಳಾದ ನಾಗರಾಜು ಮತ್ತು ತಿಮ್ಮಪ್ಪ ಸೇರಿದಂತೆ ಸ್ವಸಹಾಯ ಸಂಘಗಳ ಸದಸ್ಯರು ಇದ್ದರು.ಮಡಿಕೇರಿ: ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷ ಮುಕ್ಕಾಟಿರ ಐ. ನಾಣಯ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತೆ ಉಷಾ ಪ್ರೀತಂ ಅವರು ಆಗಮಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ಗುರಿಯನ್ನು ಇಟ್ಟುಕೊಂಡು ವಿದ್ಯಾಭ್ಯಾಸವನ್ನು ಮಾಡಿ ಉತ್ತಮ ವ್ಯಕ್ತಿಗಳಾಗಿ ಮುಂದೆ ಬರುವಂತೆ ಸಲಹೆ ನೀಡಿದರು. ನಾಣಯ್ಯ ಅವರು ಮಾತನಾಡಿ, ವಿದ್ಯಾರ್ಥಿ ಒಕ್ಕೂಟಕ್ಕೆ ಆಯ್ಕೆಯಾದ ಚುನಾಯಿತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಚುನಾಯಿತ ನಾಯಕ ಮತ್ತು ನಾಯಕಿಯರಿಗೆ ಪ್ರಮಾಣವಚನ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಚೇಂದAಡ ಜಿ. ಪೊನ್ನಪ್ಪ, ಕಾರ್ಯನಿರ್ವಾಹಕರಾದ ಪಿ.ಯು. ಬೊಳ್ಳಮ್ಮ, ಆಡಳಿತ ಅಧಿಕಾರಿ ಪಿ.ಎ. ಲಕ್ಷಿö್ಮನಾರಾಯಣ, ಸದಸ್ಯರುಗಳಾದ ಬೀನಂಡ ಎಸ್. ಪೂಣಚ್ಚ, ಮೂಕೊಂಡ ಸಿ. ನಂಜಪ್ಪ, ಡಿ. ಭಾರತಿ ಹಾಜರಿದ್ದರು. ಮುಖ್ಯ ಶಿಕ್ಷಕರಾದ ಹೆಚ್.ಡಿ. ಲೋಕೇಶ್ ಉಪಸ್ಥಿತರಿದ್ದು, ಸ್ವಾಗತ ಭಾಷಣ ನೆರವೇರಿಸಿದರು. ನಿರೂಪಣೆಯನ್ನು ಶಿಕ್ಷಕಿ ಪ್ರಮೀಳಾ ಕುಮಾರಿ ಹಾಗೂ ವಂದನಾರ್ಪಣೆಯನ್ನು ಶಿಕ್ಷಕಿ ಎ.ಸಿ. ಸುನೀತಾ ಅವರು ನೆರವೇರಿಸಿದರು.ವೀರಾಜಪೇಟೆ: ಭವ್ಯ ರಾಷ್ಟçದ ನಿರ್ಮಾಣದಲ್ಲಿ ಎನ್ಎಸ್ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಪಾತ್ರ ಅಪಾರವಾಗಿದೆ ಎಂದು ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಾಲ್ಡಾನ್ಹಾ ಅಭಿಪ್ರಾಯಪಟ್ಟರು. ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎನ್.ಎಸ್.ಎಸ್ ಸಮಾಜ ಸೇವೆಯನ್ನು ಕಲಿಸಿದರೆ ಯುವ ರೆಡ್ ಕ್ರಾಸ್ ಆರೋಗ್ಯದ ಪಾಠವನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಪ್ರಾಮಾಣಿಕತೆ, ಜವಾಬ್ದಾರಿಯುತ ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಅರಿತಾಗ ಮಾತ್ರ ನೈಜ ಸೇವೆ ಸಮಾಜಕ್ಕೆ ದೊರಕುತ್ತದೆ. ಆ ನಿಟ್ಟಿನಲ್ಲಿ ಭವಿಷ್ಯದ ಹಿತದೃಷ್ಟಿಯಿಂದ ಸರ್ವರೂ ಸದೃಢ ರಾಷ್ಟçದ ನಿರ್ಮಾಣಕ್ಕೆ ಮುಂದಾಗಬೇಕು. ಯಂಗ್ ಇಂಡಿಯಾ ಬಲಿಷ್ಠವಾಗಬೇಕೆಂದರು.
ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ. ಮದಲೈ ಮುತ್ತು ಮಾತನಾಡಿ, ಸೇವಾ ಮನೋಭಾವನೆ ಎಂಬುವುದು ಎಲ್ಲರಲ್ಲಿಯೂ ಬರಬೇಕು. ಪರರ ಹಿತಕ್ಕಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಬೇಕು ಎಂದು ಹೇಳಿದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕಿ ಹೇಮ ಅವರು ಮಾತನಾಡಿ, ಈ ಎರಡೂ ಘಟಕಗಳು ನಮ್ಮ ಕಾಲೇಜಿನಲ್ಲಿ ಕ್ರಿಯಾಶೀಲ ಘಟಕಗಳಾಗಿದ್ದು ಇತ್ತೀಚೆಗೆ ನ್ಯಾಕ್ ಸಂಸ್ಥೆಯವರಿAದ ಘಟಕಗಳ ಕಾರ್ಯಚಟುವಟಿಕೆಗಳಿಗೆ ಪ್ರಶಂಸೆ ವ್ಯಕ್ತ¥ಡಿಸಲಾಗಿದೆ. ಈ ಘಟಕಗಳಿಂದ ಮತ್ತಷ್ಟು ವಿನೂತನ ಕಾರ್ಯಕ್ರಮಗಳು ಹೊರಹೊಮ್ಮಲಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಎನ್.ಎಸ್.ಎಸ್. ಹಾಗೂ ಯುವ ರೆಡ್ ಕ್ರಾಸ್ ಘಟಕಗಳು ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರಮುಖವಾದ ಘಟಕಗಳಾಗಿದ್ದು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿವೆ. ವಿದ್ಯಾಸಂಸ್ಥೆ ಹಾಗೂ ಸಂಸ್ಥೆಯ ಹೊರಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಸಾಮಾಜಿಕ ಜಾಗೃತಿಯನ್ನು ಮೂಡಿಸುತ್ತಿದೆ ಎಂದು ಹೇಳಿದರು. ಕಾಲೇಜಿನ ಎನ್.ಎಸ್.ಎಸ್. ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಸಂಸ್ಥೆ ವತಿಯಿಂದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆನೆಡಿಕ್ಟ್ ಆರ್.ಸಾಲ್ಡಾನ್ಹಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಉಪನ್ಯಾಸಕರು, ಎನ್.ಎಸ್.ಎಸ್. ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸ್ವಯಂ ಸೇವಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸೋಮವಾರಪೇಟೆ: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ನಂದಿಗುAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೧ ವಿಧ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಅವಶ್ಯಕವಿರುವಷ್ಟು ಬರೆಯುವ ಪುಸ್ತಕಗಳು, ಲೇಖನ ಸಾಮಗ್ರಿಗಳು ಮತ್ತು ಬ್ಯಾಗ್ಗಳನ್ನು ದಾನಿಗಳಾದ ಚೆನ್ನಯ್ಯ ಅವರು ವಿತರಣೆ ಮಾಡಿದರು.
ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಮೂಲಕ ಶಾಲಾ ಮಕ್ಕಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ, ದಾನಿಗಳು ನೀಡಿದ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ಸರ್ಕಾರವು ಸರ್ಕಾರಿ ಶಾಲೆಗಳ ಉಳಿವಿಗೆ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಇದನ್ನು ಬಳಸಿಕೊಳ್ಳಬೇಕೆಂದು ಕಿವಿಮಾತು ನುಡಿದರು.
ದಾನಿಗಳಾದ ಚನ್ನಯ್ಯ ಮಾತನಾಡಿ, ತಾನೂ ಕೂಡ ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಇದೀಗ ಕಲಿಕೆಯಲ್ಲಿರುವ ಮಕ್ಕಳಿಗೆ ಕೈಲಾದ ಸಹಾಯ ಮಾಡುವ ಉದ್ದೇಶದಿಂದ ಸೌಲಭ್ಯಗಳನ್ನು ವಿತರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಶಾಲೆಯ ವತಿಯಿಂದ ದಾನಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಮುಖ್ಯ ಶಿಕ್ಷಕ ಗಣಪತಿ, ಸಹ ಶಿಕ್ಷಕಿ ವಸಂತಿ, ಅತಿಥಿ ಶಿಕ್ಷಕಿ ಮೇನಕ ಮತ್ತು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಇದ್ದರು.ಮಡಿಕೇರಿ: ಪೊನ್ನಂಪೇಟೆಯ ಸಂತ ಅಂತೋಣಿ ವಿದ್ಯಾಸಂಸ್ಥೆಯಲ್ಲಿ ವನ್ಯಜೀವಿ ಸಂರಕ್ಷಣೆ ಮತ್ತು ಮಾನವ ವನ್ಯಜೀವಿ ಸಂಘರ್ಷದ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಕೊಡಗು ಜಿಲ್ಲಾ ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷರಾದ ಕುಂಞಗಡ ಬೋಸ್ ಮಾದಪ್ಪ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕೊಡಗಿನಲ್ಲಿ ಆನೆ-ಹುಲಿಗಳ ಹಾವಳಿ ಬಗ್ಗೆ ಚರ್ಚಿಸಲಾಯಿತು. ವಿವಿಧ ಬಗೆಯ ಹಾವುಗಳ ಬಗ್ಗೆ, ಅವುಗಳ ಜೀವನ ಶೈಲಿ ಮತ್ತು ಹಾವುಗಳ ರಕ್ಷಣೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಸಂಚಾಲಕರಾದ ಫಾ.ಮಾನ್ಯುವಲ್ ಡಿಸೋಜ, ಪ್ರಾಂಶುಪಾಲರಾದ ಶಂಭು ಕಾರ್ಯಪ,್ಪ ಮುಖ್ಯ ಶಿಕ್ಷಕಿ ರಜನಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಿದ್ದಾಪುರ: ಪಾಲಿಬೆಟ್ಟದ ಜಿಎಂಪಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ವತಿಯಿಂದ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ೧೯೯೬ರ ಪಾಲಿಬೆಟ್ಟದ ಜಿಎಂಪಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಒಂದಾಗಿ ಗುರುಗಳಿಗೆ ವಂದನೆ ಸಲ್ಲಿಸಿದರು.
ಇದೇ ಸಂದರ್ಭ ಹಳೆಯ ವಿದ್ಯಾರ್ಥಿಗಳು ಕೊಡುಗೆಯಾಗಿ ನೀಡಿದ ಪ್ರವೇಶ ದ್ವಾರ ಗೇಟನ್ನು ನಿವೃತ್ತ ಶಿಕ್ಷಕಿ ಪಡುವಂಡ ದಮಯಂತಿ ಉದ್ಘಾಟಿಸಿದರು. ಈ ಸಂದÀರ್ಭ ಪಾಲಿಬೆಟ್ಟ ಜಿಎಂಪಿ ಶಾಲೆಯ ಮುಖ್ಯ ಶಿಕ್ಷಕಿ ಸೋಫಿಯ ಮಾತನಾಡಿ, ತಾವು ಕಲಿತ ಶಾಲೆಯನ್ನು ಮರೆಯದೆ ವಿದ್ಯೆ ಕಲಿತ ಶಾಲೆಗೆ ತಮ್ಮಿಂದಾಗುವ ಕೊಡುಗೆಯನ್ನು ನೀಡುವ ಗುಣವನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿದ ಶಿಕ್ಷಕರು ಧನ್ಯರು. ಈ ಗುಣವನ್ನು ಎಲ್ಲಾ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭ ನಿವೃತ್ತ ಶಿಕ್ಷಕಿ ಪಡುವಂಡ ದಮಯಂತಿ ಹಾಗೂ ಲೆಕ್ಕಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿರುವ ಸಹಪಾಠಿ ನರಸಿಂಹ ರಾಜು ಅವರನ್ನು ಸನ್ಮಾನಿಸಲಾಯಿತು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕರುಂಬಯ್ಯ, ಎಸ್ಡಿಎಂಸಿ ಅಧ್ಯಕ್ಷರು, ಸಹಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು ಹಾಜರಿದ್ದರು. ಮಡಿಕೇರಿ: ಕಿಗ್ಗಾಲು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಯಿತು. ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು ಗರ್ಭಿಣಿ, ಬಾಣಂತಿಯರಿಗೆ ಎದೆಹಾಲಿನ ಮಹತ್ವದ ಬಗ್ಗೆ, ಪೌಷ್ಟಿಕ ಆಹಾರ ಬೆಳೆಸಿ ಬಳಸುವ ಬಗ್ಗೆ ತಿಳಿಸಿದರು.
ಕಾಂತೂರು ಶಾಲಾ ಮುಖ್ಯೋಪಾಧ್ಯಾಯರಾದ ಹೇಮಲತಾ, ಎದೆಹಾಲಿನ ಮಹತ್ವದ ಬಗ್ಗೆ ತಿಳಿಸಿದರು. ದಾನಿಗಳಾದ ಬಾಚೆಟ್ಟಿರ ಕಮಲ ಉದಯ, ಚಾಮುಂಡೇಶ್ವರಿ ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಪೋಷಣ್ ಅಭಿಯಾನ ಸಿಬ್ಬಂದಿ ತೇಜಸ್ವಿನಿ, ಅಂಗನವಾಡಿ ಕಾರ್ಯಕರ್ತೆ ಗೌರಿ ಹಾಜರಿದ್ದರು.ಮಡಿಕೇರಿ: ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಕಾಲೇಜಿನ ನಾಯಕಿಯಾಗಿ ಪ್ರಿಯ ಸಿ.ಆರ್, ಕಾರ್ಯದರ್ಶಿಯಾಗಿ ಸ್ನೇಹ, ಜಂಟಿ ಕಾರ್ಯದರ್ಶಿಯಾಗಿ ಅಮೃತ ಎಂ.ಎಸ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಿಧ್ಯಾಶ್ರಿ, ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಿಯದರ್ಶಿನಿ, ಕ್ರೀಡಾ ಕಾರ್ಯದರ್ಶಿಯಾಗಿ ಸೌಜನ್ಯ ಕೆ.ಜಿ, ಎನ್.ಎಸ್.ಎಸ್ ಕಾರ್ಯದರ್ಶಿಯಾಗಿ ಆಶಿತ, ರೇಂರ್ಸ್ ಕಾರ್ಯದರ್ಶಿಯಾಗಿ ಉಮಾವತಿ ಅವರುಗಳು ಆಯ್ಕೆಗೊಂಡಿದ್ದಾರೆ. ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ಹದಿಹರೆಯದ ಮಕ್ಕಳ ಆಪ್ತ ಸಲಹೆಗಾರರಾದ ಎಸ್.ಎಸ್. ರಮ್ಯಾ ಅವರು ಮಾತನಾಡಿ, ಕುಟುಂಬದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಹಾಗೂ ಮುಂದಿನ ಪೀಳಿಗೆಯನ್ನು ಪೋಷಿಸುವ ಹೆಣ್ಣು ಮಕ್ಕಳ ಆರೋಗ್ಯ ಉತ್ತಮವಾಗಿರಬೇಕು.
ಹೆಣ್ಣು ಮಕ್ಕಳು ಓದು ಸೇರಿದಂತೆ ನಾನಾ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಅವರು ತಮ್ಮ ಆರೋಗ್ಯದ ಕಡೆ ನಿರ್ಲಕ್ಷö್ಯ ವಹಿಸದೆ ಎಚ್ಚರಿಕೆಯಿಂದ ಇರಬೇಕು.
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಾಗುತ್ತಿದ್ದು, ಎಲ್ಲಾ ಹೆಣ್ಣು ಮಕ್ಕಳು ತಮ್ಮ ದೈನಂದಿನ ಕಾರ್ಯನಿರ್ವಹಣೆ ಜೊತೆಗೆ, ಉತ್ತಮ ಆಹಾರ ಸೇವನೆ ಹಾಗೂ ಉತ್ತಮ ಜೀವನ ಶೈಲಿಯನ್ನು ಮೈಗೂಡಿಸಿಕೊಂಡು, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್ಎಸ್ಎಸ್. ಅಧಿಕಾರಿ ವಿಪ್ರ ನೀಲಮ್ಮ, ಉಪನ್ಯಾಸಕಿಯರು ಹಾಗೂ ಎನ್.ಎಸ್.ಎಸ್. ಸ್ವಯಂಸೇವಕರು ಹಾಜರಿದ್ದರು.