ಮಡಿಕೇರಿ, ಆ. ೨೧: ಸಾರ್ವಜನಿಕ ಗ್ರಂಥಾಲಯ ಇಲಾಖೆಯು, ೨೦೨೨ ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಡಾ. ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ. ಬಡಾವಣೆ, (ಡಾ.ಬಾಲ ಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ) ವಿಜಯನಗರ, ಬೆಂಗಳೂರು ಇಲ್ಲಿ ತಾ. ೨೦ ರಿಂದ ೨೨ ರವರೆಗೆ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಏರ್ಪಡಿಸಲಾಗಿದೆ.
ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಕಚೇರಿಯಲ್ಲಿ ಪ್ರದರ್ಶಿಸಲಾಗುವುದು ಹಾಗೂ ಇಲಾಖೆಯ ಅಧಿಕೃತ ವೆಬ್ಸೈಟ್ ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪ್ರಕಟಿಸಲಾಗುತ್ತಿದೆ.
ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾಗಿ ಸಲ್ಲಿಸಿದ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ತಾ. ೩೦ ರ ಸಂಜೆ ೫.೩೦ ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ೪ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಲು ತಿಳಿಸಿದೆ.
ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ ತಿಳಿಸಿದ್ದಾರೆ.