ಕುಶಾಲನಗರ, ಆ. ೨೧: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಒತ್ತಾಯಿಸಿ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಆಶ್ರಯದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು.
ಪಟ್ಟಣದ ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಗೊAಡಿತು. ಬ್ಯಾನರ್, ನಾಮಫಲಕಗಳನ್ನು ಹಿಡಿದು ಅಪಪ್ರಚಾರ ಎಸಗುತ್ತಿರುವ ಕಿಡಿಗೇಡಿಗಳ ವಿರುದ್ಧ ಘೋಷಣೆ ಕೂಗುತ್ತಾ ಭಕ್ತರು ಮೆರವಣಿಗೆಯಲ್ಲಿ ಸಾಗಿದರು.
ಕುಶಾಲನಗರ ಶ್ರೀ ಗಣಪತಿ ದೇವಾಲಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿದರು.
ಈ ಸಂದರ್ಭ ಶನಿವಾರಸಂತೆ ಬಳಿಯ ಮುಳ್ಳೂರು ಮಠದ ಶ್ರೀ ಬಸವಲಿಂಗ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಅನಾದಿಕಾಲದಿಂದಲೂ ಹಿಂದೂ ಧಾರ್ಮಿಕ ಕೇಂದ್ರ,
(ಮೊದಲ ಪುಟದಿಂದ) ಮಠಮಾನ್ಯಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆತರುವ ಪಿತೂರಿ ನಡೆಯುತ್ತಿದೆ. ಹಿಂದಿನಿAದಲೂ ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲೆ ಅಪಪ್ರಚಾರ ಮಾಡುತ್ತಿದ್ದು, ಇದರಿಂದ ಭಕ್ತರು ಆಕ್ರೋಶಗೊಳ್ಳುವಂತಾಗಿದೆ. ಆದರೆ ಭಕ್ತರಿಗೆ ಕ್ಷೇತ್ರದ ಬಗ್ಗೆ ಭಕ್ತಿ, ಶ್ರದ್ಧೆ ಕಡಿಮೆಯಾಗುವುದಿಲ್ಲ ಎಂಬುದು ತಿಳಿಯಬೇಕು ಎಂದರು.
ಧಾರ್ಮಿಕ ಕ್ಷೇತ್ರಗಳ ಮೇಲೆ ವೈಚಾರಿಕತೆ ಹೆಸರಿನಲ್ಲಿ ದಾಳಿ ನಡೆಸಲಾಗುತ್ತಿದೆ. ಪುಣ್ಯಕ್ಷೇತ್ರ ಧಾರ್ಮಿಕ ವೈಚಾರಿಕತೆ ಮುಂದಿಟ್ಟುಕೊAಡು ದಾಳಿ ಮಾಡಿದರೂ ಹಿಂದೂ ಧರ್ಮ ಅಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಸಲ್ಲಿಸುತ್ತಿರುವುದು ಧರ್ಮಸ್ಥಳ ಕ್ಷೇತ್ರವಾಗಿದ್ದು, ಇದರಿಂದ ಸಮಾಜ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬೆಳವಣಿಗೆ ಹೊಂದಿದ್ದಾರೆ. ಗ್ರಾಮೀಣ ಜನರ, ಮಹಿಳೆಯರ ಬದುಕು ಹಸನಾಗಬೇಕು ಎಂದು ಧರ್ಮದರ್ಶಿ ಹೆಗ್ಗಡೆ ಅವರು ಕೋಟ್ಯಂತರ ರೂಪಾಯಿ ಯೋಜನೆ ಮೂಲಕ ಅನುದಾನ ನೀಡಿದ್ದಾರೆ ಎಂದರು.
ಕೊಡಗು ಜನಜಾಗೃತಿ ವೇದಿಕೆ ಸದಸ್ಯ ನಿಸರ್ಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಗಳ, ದೇವಾಲಯಗಳ, ಕೆರೆಗಳ ಅಭಿವೃದ್ಧಿಗೆ ಒತ್ತುನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೂಲಕ ಕೋಟ್ಯಂತರ ಮಹಿಳೆಯರಿಗೆ ಸಾಲಸೌಲಭ್ಯ ನೀಡಿ ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಕ್ಷೇತ್ರದ ಧರ್ಮದರ್ಶಿ ವೀರೆಂದ್ರ ಹೆಗ್ಗಡೆ ಅವರು ಕಾರಣರಾಗಿದ್ದಾರೆ ಎಂದರು. ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಪುಂಡರೀಕಾಕ್ಷ ಮಾತನಾಡಿ, ಧರ್ಮಸ್ಥಳ ಹಾಗೂ ಹೆಗ್ಗಡೆ ಅವರ ಬಗ್ಗೆ ಕೆಲವರು ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ಧಾರ್ಮಿಕ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಯಪ್ಪ ವೃತ್ತದಿಂದ ರಥಬೀದಿ ಮೂಲಕ ಮೆರವಣಿಗೆ ತೆರಳಿ ತಹಶೀಲ್ದಾರ್ ಕಚೇರಿ ಮೂಲಕ ವೇದಿಕೆಯ ಉಪಾಧ್ಯಕ್ಷ ವಿ.ಡಿ. ಪುಂಡರೀಕಾಕ್ಷ ಮತ್ತು ಸದಸ್ಯರಾದ ಕೆ.ಎಸ್. ರಾಜಶೇಖರ್ ಮತ್ತಿತರರು ಭಕ್ತಾಭಿಮಾನಿಗಳ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.
ಈ ಸಂದರ್ಭ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎ.ಟಿ. ರಂಗಸ್ವಾಮಿ, ವೇದಿಕೆ ಸದಸ್ಯರಾದ ಎ.ಎಸ್. ಚಂದ್ರಶೇಖರ್ ಆವರ್ತಿ, ಎಚ್.ಎಂ. ಚಂದ್ರು, ಎಸ್.ಕೆ. ಸತೀಶ್, ಕೆ.ಎಸ್. ರಾಜಶೇಖರ್, ಎಂ.ಎನ್ ಚಂದ್ರಮೋಹನ್, ವಿವಿಧ ಸಂಘಟನೆಗಳ ಮುಖಂಡರಾದ ಬಿ.ಆರ್. ನಾಗೇಂದ್ರ ಪ್ರಸಾದ್, ಮನುನಂಜುAಡ, ಬೋಸ್ ಮೊಣ್ಣಪ್ಪ, ಕೊಡಗನ ಹರ್ಷ ಎಂ.ಎA. ಚರಣ್, ಎಚ್.ಎಂ. ಮಧುಸೂದನ್, ಎಂ.ಎಸ್. ಶಿವಾನಂದ, ಅಮೃತ್ ರಾಜ್ ಹಿಂದೂಪರ ಸಂಘಟನೆಗಳ ಪ್ರಮುಖರಾದ ಡಿ. ಸಂತೋಷ್, ರಮೇಶ್ ಬೊಟ್ಟುಮನೆ, ಜನಾರ್ದನ್ ಎಂ.ಡಿ. ಕೃಷ್ಣಪ್ಪ, ಮಂಜುನಾಥ್, ಪ್ರವೀಣ್, ಧರ್ಮ, ಹರ್ಷ, ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.