್ಟçÃಯ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಬಿಚ್ಚಿಟ್ಟ ಮತಗಳ್ಳತನವನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯವ್ಯಾಪಿ ನಡೆಸುತ್ತಿರುವ “ಮತಗಳ್ಳತನ ನಿಲ್ಲಿಸಿ”ಸ್ಟಿಕರ್ ಅಭಿಯಾನ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಅಭಿಯಾನ ನಡೆಯಿತು.
ಅಭಿಯಾನವು ವೀರಾಜಪೇಟೆ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಿತು. ನಗರದ ಹೃದಯಭಾಗವಾದ ಗಡಿಯಾರ ಕಂಬದಿAದ ಪ್ರಾರಂಭಗೊAಡು ಖಾಸಗಿ ಬಸ್ಸು ನಿಲ್ದಾಣ, ಮಟನ್ ಮಾರ್ಕೆಟ್ ಜಂಕ್ಷನ್, ಕೆಎಸ್ ಆರ್ ಟಿಸಿ ಬಸ್ಸು ನಿಲ್ದಾಣ, ದೊಡ್ಡಟ್ಟಿ ಚೌಕಿ ಸೇರಿದಂತೆ ಮುಖ್ಯ ಬೀದಿಗಳಲ್ಲಿ ಅಭಿಯಾನ ನಡೆಸಿತು.
ದೊಡ್ಡಟ್ಟಿ ಚೌಕಿಯಿಂದ ಗಡಿಯಾರಕಂಬದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ನಂತರ ಗಡಿಯಾರ ಕಂಬದ ಬಳಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ವೀರಾಜಪೇಟೆ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚೆಂಗಪ್ಪ ಮಾತನಾಡಿ ಕಳೆದ ಲೋಕಸಭಾ ಚುನಾವಣೆ ಬಿಜೆಪಿ ಪಕ್ಷವು ಹಲವು ರೀತಿಯ ಮತವನ್ನು ಕಳ್ಳತನ ಮಾಡಿ ಜಯಶೀಲರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದಾಖಲೆ ಸಮೇತ ಬಹಿರಂಗ ಪಡಿಸಿದ್ದಾರೆ. ಅದುದರಿಂದ ಅವರಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಯುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಮಾತನಾಡಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಪಾರದರ್ಶಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರು.
ಪೊನ್ನಂಪೇಟೆ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ದೇವಯ್ಯ ಮಾತನಾಡಿ ಕೇಂದ್ರ ಬಿಜೆಪಿ ಸರ್ಕಾರ ಕಳ್ಳ ಮತದಾನ ಮಾಡಿಕೊಂಡು ಗೆಲುವು ಸಾಧಿಸಿದ್ದಿರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಪ್ರತಿಭಟನೆಯಲ್ಲಿ ತಿಳಿಸಿದರು.
ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ, ವೀರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಶಬೀರ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಧ್ಯಾನ್ ದೇವಯ್ಯ ಹಾಗೂ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ಸಿನ ವೀರಾಜಪೇಟೆ, ನಾಪೊಕ್ಲು, ಪೊನ್ನಂಪೇಟೆ ಬ್ಲಾಕ್‌ನ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉಬೈದ್ ನಾಪೋಕ್ಲು, ಪ್ರ‍್ರದಾನ ಕಾರ್ಯದರ್ಶಿ ಅಶ್ಪಾಕ್ ಚಾಮಿಯಾಲ, ಶ್ರಂಗ, ಸಿದ್ದಿಕ್, ನೀರುಪ್, ಸಿರಾಜ್ ಹಾಗೂ ವರುಣ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.