ಸಿದ್ದಾಪುರ, ಆ. ೨೨. ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ತಿತಿಮತಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸಿ ಕೃಷಿ ಪಸಲುಗಳನ್ನು ಹಾನಿ ಮಾಡುತ್ತಿದ್ದ ಹಾಗೂ ಮಾನವನ ಮೇಲೆ ದಾಳಿ ನಡೆಸುತ್ತಿದ್ದ ಕಾಡಾನೆಗಳ ಮೂರು ಹಿಂಡುಗಳ ಒಟ್ಟು ೩೭ಕ್ಕೂ ಅಧಿಕ ಕಾಡಾನೆಗಳನ್ನು ಕಾರ್ಯಾಚರಣೆ ಮೂಲಕ ಮಾಲ್ದಾರೆ ಗ್ರಾಮದ ಮೀಸಲು ಅರಣ್ಯಕ್ಕೆ ಓಡಿಸಲಾಯಿತು. ಈ ಸಂದರ್ಭದಲ್ಲಿ ೫ ಮರಿಯಾನೆಗಳು ಸೇರಿದಂತೆ ರೇಡಿಯೋ ಕಾಲರ್ ಅಳವಡಿಸಿರುವ ಆನೆಗಳು ಕಂಡುಬAದಿವೆ ಎಂದು ಉಪವಲಯ ಅರಣ್ಯ ಅಧಿಕಾರಿ ಶಶಿ ತಿಳಿಸಿದ್ದಾರೆ.
ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾರ್ಗದರ್ಶನ, ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಪಿ.ಟಿ. ಶಶಿ, ಅರಣ್ಯ ಸಿಬ್ಬಂದಿ, ಆರ್.ಆರ್ .ಟಿ, ವನ್ಯಜೀವಿ ವಲಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.