ಸೋಮವಾರಪೇಟೆ, ಆ.೨೨: ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ (ಯಿಫಾ) ಸಂಘಟನೆಯ ಆಶ್ರಯದಲ್ಲಿ ಹುದುಗೂರು ಗ್ರಾಮದ ಶ್ರೀ ಕಾಳಿಕಾಂಬ ಯುವಕ ಸಂಘದ ಸಹಯೋಗದೊಂದಿಗೆ ಹುದುಗೂರು ಗ್ರಾಮದಲ್ಲಿ ತಾ. ೨೩ರಂದು (ಇಂದು) ೭ನೇ ವರ್ಷದ ನಾಟಿ ಹಬ್ಬ ಹಾಗೂ ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿ ಸಜನ್ ಮಂದಣ್ಣ ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ಕ್ಕೆ ಹುದುಗೂರು ಯುವಕ ಸಂಘದ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಸದ ಯದುವೀರ್ ಒಡೆಯರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಡಾ. ಮಂತರ್ ಗೌಡ, ಮಾಜೀ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕೂಡಿಗೆ ಗ್ರಾ.ಪಂ. ಅಧ್ಯಕ್ಷ ಕೆ.ಟಿ. ಗಿರೀಶ್, ಉದ್ಯಮಿಗಳಾದ ಹರಪಳ್ಳಿ ರವೀಂದ್ರ, ಅರುಣ್ ಕೊತ್ನಳ್ಳಿ, ಗಿರೀಶ್ ಮಲ್ಲಪ್ಪ, ಐಶ್ವರ್ಯ ಎಜುಕೇಷನ್ ಟ್ರಸ್ಟ್ನ ಪುಲಿಯಂಡ ರಾಮ್ ದೇವಯ್ಯ, ಗುತ್ತಿಗೆದಾರ ಪುರುಷೋತ್ತಮ್ ರೈ, ಮಲ್ನಾಡ್ ಯೂತ್ ಅಸೋಸಿಯೇಷನ್ ಅಧ್ಯಕ್ಷ ಯಶ್ವಂತ್ ಬೆಳ್ಳಿಗೌಡ, ಹುದುಗೂರು ಗ್ರಾಮ ಸಮಿತಿ ಅಧ್ಯಕ್ಷ ತೊತ್ತಿಯನ ಚಾಮಿ, ಕಾಳಿಕಾಂಬ ಯುವಕ ಸಂಘದ ಅಧ್ಯಕ್ಷ ಐಮುಡಿಯಂಡ ಶರತ್ ಅವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗದ್ದೆ ನಾಟಿ ಕಾರ್ಯಕ್ರಮದ ನಂತರ ಜಿಲ್ಲಾ ಮಟ್ಟದ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟಗಳು ನಡೆಯಲಿವೆ. ವಿಜೇತ ತಂಡಗಳಿಗೆ ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಸಜನ್ ಮಂದಣ್ಣ ತಿಳಿಸಿದ್ದಾರೆ. ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಬಿಜೆಪಿ ಯುವ ಮೋರ್ಚಾ ಮಾಜೀ ಅಧ್ಯಕ್ಷ ಚಂದ್ರಶೇಖರ್ ಹೇರೂರು, ಸಾಂದೀಪನಿ ಶಾಲೆಯ ಮುಖ್ಯಸ್ಥ ಲಿಖಿತ್ ದಾಮೋದರ್, ವಿಎಸ್‌ಎಸ್‌ಎನ್ ಸದಸ್ಯ ಕಿರಣ್ ಹೊಸಳ್ಳಿ, ಮಹೇಶ್ ಗುರಪ್ಪ, ಮಂಜುನಾಥ್ ಹೊಸಳ್ಳಿ, ಕೆ.ಡಿ. ವೀರಪ್ಪ ಸೇರಿದಂತೆ ಇತರರು ಭಾಗವಹಿಸಲಿ ದ್ದಾರೆ ಎಂದು ಮಾಹಿತಿ ನೀಡಿದ್ದಾರೆ.