ಬೆಂಗಳೂರು, ಆ.೧ ೬: ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ, ಅವಹೇಳನ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನಕ್ಕೆ ಚಾಲನೆ ದೊರಕಿತು. ನೆಲಮಂಗಲ ಟೋಲ್ ಬಳಿಯಿಂದ ಸುಮಾರು ೮೦೦ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಿಗ್ಗೆ ಯಲಹಂಕ ಕ್ಷೇತ್ರದ ಭಕ್ತರ ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಯಾಣ ಆರಂಭವಾಯಿತು.