ಸೋಮವಾರಪೇಟೆ, ಆ.೨೪: ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ತಾ. ೨೫ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಸೋಮವಾರಪೇಟೆ ಎ. ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ತಿಳಿಸಿದ್ದಾರೆ.

ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾ. ೨೫ ರಂದು ಬೆಳಿಗ್ಗೆ ೧೦ಕ್ಕೆ ಪ್ರಾಥಮಿಕ ಶಾಲೆಯ ೧೪ ವರ್ಷ ವಯೋಮಾನದೊಳಗಿನ ವಿದ್ಯಾರ್ಥಿಗಳಿಗೆ ವಲಯಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಯಶೋಧ ತಿಳಿಸಿದ್ದಾರೆ.