ಮಡಿಕೇರಿ, ಆ. ೧೬: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ೧೧೦ ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ತಾ. ೨೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಾಧ್ಯಾಪಕ ಕೆ.ಸಿ.ದಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್.ದೀಪಕ್ ಇತರರು ಪಾಲ್ಗೊಳ್ಳಲಿದ್ದಾರೆ.