ಮಡಿಕೇರಿ, ಆ. ೧೬: ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಿಂದ ತಾ. ೧೮ ರಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಮೇಳದಲ್ಲಿ ವಿವಿಧ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾvಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋ ಆರ್ಡಿನೇಟರ್ ೮೨೯೬೦೨೦೮೨೬ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.