ಕೂಡಿಗೆ, ಆ. ೧೬: ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜು, ಹೆಬ್ಬಾಲೆ ಪ್ರೌಢಶಾಲಾ ವಿಭಾಗ ಹಾಗೂ ಕೆನರಾ ಬ್ಯಾಂಕ್ ಇದರ ಸಂಯುಕ್ತಾಶ್ರಯದಲ್ಲಿ ೮, ೯. ಮತ್ತು ೧೦ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗಾಗಿ ಪ್ರತಿ ಮಗುವಿಗೂ ತಲಾ ೫ ಸಾವಿರ ಚೆಕ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಬಸವರಾಜ ಶೆಟ್ಟಿ ವಹಿಸಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕ ಎಸ್. ಮಹೇಶ್ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಚೆಕ್ ವಿತರಣೆ ಮಾಡಿದರು. ದೇಶದಲ್ಲಿರುವ ಅನೇಕ ಕಾರ್ಪೊರೇಟ್ ಕಂಪನಿಗಳು ತಮ್ಮಲ್ಲಿ ಬಂದು ಲಾಭಾಂಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಸಮಾಜ ಮುಖಿಯಾಗಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಸಹಾಯ ಮಾಡಲಾಗುವುದು ಎಂದರು. ವಿದ್ಯಾರ್ಥಿಗಳಿಗೆ ಬ್ಯಾಂಕ್ ನೀಡುವ ಮೊತ್ತದ ಹಣದಲ್ಲಿ ತಮ್ಮ ಮುಂದಿನ ಶೈಕ್ಷಣಿಕ ಪ್ರಗತಿಗೆ ಸಹಕಾರಿ ಯಾಗುತ್ತದೆ ಎಂದು ಶಾಲೆಯ ಹಿರಿಯ ಶಿಕ್ಷಕ ಎನ್. ವೆಂಕಟನಾಯಕ್ ತಿಳಿಸಿದರು.

ಡಿ. ಕವಿತಾ ಸ್ವಾಗತಿಸಿ, ಸಿ.ಡಿ. ಲೋಕೇಶ್ ನಿರೂಪಿಸಿ, ವಂದಿಸಿದರು.