ಮಡಿಕೇರಿ, ಆ. ೨೪ : ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆಯು ಸೆ.೧೪ರಂದು ನಡೆಯಲಿದ್ದು, ಈ ಸಂದರ್ಭ ಸಂಘದ ಸದಸ್ಯರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
೨೦೨೪-೨೫ನೇ ಸಾಲಿನಲ್ಲಿ ೧೦ನೇ ತರಗತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. ೯೫ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಸೆ. ೫gವರೆಗೆ ಸಂಘದ ಸುಳ್ಯ ಪ್ರಧಾನ ಕಚೇರಿಗೆ ಹಾಗೂ ಆಯಾ ಶಾಖೆಗಳಲ್ಲಿ ತಮ್ಮ ಅಂಕ ಪಟ್ಟಿಯ ವಿವರಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷ ಕೆ.ಸಿ. ಸದಾನಂದ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.