ಕೂಡಿಗೆ, ಆ. ೧೬: ಮಳೆ ಹೆಚ್ಚಾಗಿ ಹಾರಂಗಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ೮ ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಕಳೆದ ೧೨ ದಿನಗಳಿಂದ ಕ್ರೆಸ್ಟ್ ಗೇಟ್‌ಗಳಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ೮ ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಡ್ಯಾಂ ಭರ್ತಿ ಹಂತದಲ್ಲಿರುವ ಹಿನ್ನೆಲೆಯಲ್ಲಿ ಮತ್ತು ಭದ್ರತಾ ಹಿತದೃಷ್ಟಿಯಿಂದ ನಾಲ್ಕು ಕ್ರೆಸ್ಟ್ ಗೇಟ್ ಮೂಲಕ ನೀರು ಹರಿಬಿಡಲಾಯಿತು.

ನದಿಗೆ ೬ ಸಾವಿರ ಕ್ಯೂಸೆಕ್ಸ್ ಮತ್ತು ವಿದ್ಯುತ್ ಘಟಕದ ಮೂಲಕ ೨ ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ ತಿಳಿಸಿದ್ದಾರೆ.