ಕುಶಾಲನಗರ, ಆ. ೨೦: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯದ ಬಗ್ಗೆ ಷಡ್ಯಂತ್ರ, ಅಪಪ್ರಚಾರ ವಿರೋಧಿಸಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರದ ಬಗ್ಗೆ ನಿರಂತರವಾಗಿ ಸುಳ್ಳು ಮಾಹಿತಿ ನೀಡುತ್ತಿರುವ ಬಗ್ಗೆ ತಕ್ಷಣ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಭಕ್ತ ಮಂಡಳಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಜಾಥಾ ಮತ್ತು ತಾಲೂಕು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಭಕ್ತಾದಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಭಿಮಾನಿಗಳ ಮನವಿ ಸಲ್ಲಿಕೆ ತಾ.೨೧ರಂದು (ಇಂದು) ನಡೆಯಲಿದೆ.ಬೆಳಿಗ್ಗೆ ೧೦:೩೦ಕ್ಕೆ ಕುಶಾಲನಗರ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದಿಂದ ಬೃಹತ್ ಪ್ರತಿ ಭಟನೆ ಮೆರವಣಿಗೆ ಹೊರಟು ಕುಶಾಲನಗರ ಗಣಪತಿ ದೇವಾಲಯ ಬಳಿ ಸೇರಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸ ಲಾಗುವುದು ಎಂದು ಕುಶಾಲನಗರ ಭಕ್ತ ಜನ ಮಂಡಳಿ ಪ್ರಕಟಣೆ ತಿಳಿಸಿದೆ.