ಸೋಮವಾರಪೇಟೆ, ಆ. ೨೩: ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ಅಧ್ಯಕ್ಷರನ್ನಾಗಿ ಚಿಕ್ಕತೋಳೂರು ಗ್ರಾಮ ನಿವಾಸಿ, ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜೀ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆ, ಸಿ.ಟಿ. ಸೋಮಶೇಖರ್ ಅವರನ್ನು ಜಿಲ್ಲಾ ಶಿಕ್ಷಕರ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ನೇಮಕಗೊಳಿಸಿದ್ದಾರೆ.
ತಾಲೂಕು ಸಂಘದ ಅಧ್ಯಕ್ಷರಾಗಿ ಒಂದು ಅವಧಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎರಡು ಅವಧಿ ಸೇವೆ ಸಲ್ಲಿಸಿರುವ ಇವರು ಪ್ರಸಕ್ತ ವರ್ಷ ಏಪ್ರಿಲ್ ತಿಂಗಳಲ್ಲಿ ನಿವೃತ್ತರಾಗಿದ್ದಾರೆ.