ಬೆಳ್ತಂಗಡಿ, ಆ. ೨೩: ಧರ್ಮಸ್ಥಳ ಗ್ರಾಮದಲ್ಲ್ಲಿ ಶವಗಳÀನ್ನು ಹೂತಿರುವುದಾಗಿ ಆರೋಪಿಸಿದ್ದ ಅನಾಮಿಕ ದೂರುದಾರ “ಮಾಸ್ಕ್ ಮ್ಯಾನ್”ನ ಗುರುತನ್ನು ಇಂದು ಎಸ್‌ಐಟಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಆತ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಪತ್ತೆಯಾಗಿದೆ. ಆತನನ್ನು ಇಂದು ಬೆಳಿಗ್ಗೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಷ್ಟು ದಿನ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಮುಖವಾಡವನ್ನು ತೆಗೆಯಲಾಗಿದ್ದು ಗುರುತು ಬಹಿರಂಗಪಡಿಸಲಾಗಿದೆ. ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ೧೦ ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶಕ್ಕೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ರಾಜ್ಯದ ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರವಾಗಿರುವ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಹೊಂದಿರುವ ಧರ್ಮಸ್ಥಳ ಸುತ್ತಮುತ್ತ ಹಲವು ಶವಗಳನ್ನು ಹೂತಿದ್ದಾಗಿ ತಲೆ ಬುರುಡೆಯೊಂದನ್ನು ಹೊತ್ತುಕೊಂಡು ಬಂದು ಈ ಅನಾಮಿಕ ವ್ಯಕ್ತಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದ. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿತ್ತು. ಎಸ್‌ಐಟಿ ಈ ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಧರ್ಮಸ್ಥಳ ಸುತ್ತಮುತ್ತಲಿನ ಸುಮಾರು ೧೩ ಕ್ಕೂ ಅಧಿಕ ಪ್ರದೇಶದಲ್ಲಿ ಅಲ್ಲಲ್ಲಿ ಭಾರೀ ಗುಂಡಿ-ಹೊAಡಗಳನ್ನು ಅಗೆದು ತೆಗೆದು ಉತ್ಖನನ ಮೂಲಕ ಆತನ ಸಮ್ಮುಖದಲ್ಲಿಯೇ ಹುಡುಕಾಟ ನಡೆಸಿತ್ತು. ಕಳೆದ ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಕೊಲೆ ಪ್ರಕರಣಗಳು ನಡೆದು ಶವಗಳನ್ನು ಸಮಾಧಿ ಮಾಡಲಾಗಿದೆ ಎಂದು ಚಿನ್ನಯ್ಯ ಆರೋಪಿಸಿದ್ದ. ಆದರೆ, ಎಸ್‌ಐಟಿಗೆ ಒಂದೆರಡು ಕಡೆ ಕೆಲವೊಂದು ಸಣ್ಣ ಪುಟ್ಟ ಅಸ್ಥಿಗಳು ಬಿಟ್ಟರೆ ಬೇರೆಲ್ಲೂ ಏನೂ ಕುರುಹು ಸಿಕ್ಕದೆ ತನಿಖೆ ವ್ಯರ್ಥಗೊಂಡಿತ್ತು.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮಾಜಿ ನೈರ್ಮಲ್ಯ ಕೆಲಸಗಾರನಾಗಿದ್ದೆ ಎಂದು ಈ ಅನಾಮಿಕ ವ್ಯಕ್ತಿ ಹೇಳಿಕೊಂಡಿದ್ದ. ಕಳೆದ ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಈತನ ಹೇಳಿಕೆಗಳು ಮತ್ತು ದಾಖಲೆಗಳಲ್ಲಿ ಅಸಂಗತತೆ ಕಂಡುಬAದ ನಂತರ ಸುಳ್ಳು ಸಾಕ್ಷ್ಯ ನುಡಿದ ಆರೋಪದ ಮೇಲೆ ಬಂಧಿಸಲಾಯಿತು.

ಇಂದು ಬೆಳಗ್ಗೆ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಕರೆತಂದಿದ್ದರು. ಹಲವಾರು ಗಂಟೆಗಳ ವಿಚಾರಣೆಯ ನಂತರ ಆತನನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ವಿಜಯೇಂದ್ರ ಅವರ ಮುಂದೆ ಹಾಜರುಪಡಿಸಲಾಯಿತು.

ಹೆಚ್ಚಿನ ತನಿಖೆಗಾಗಿ ಎಸ್‌ಐಟಿ ೧೦ ದಿನಗಳ ಕಸ್ಟಡಿಗೆ ಕೋರಿತು. ಚಿನ್ನಯ್ಯ ಇದ್ದಕ್ಕಿದ್ದಂತೆ ಬುರುಡೆ ಕಥೆ ಹೆಣೆಯಲು ಕಾರಣವೇನು ಆತನ ಹಿಂದೆ ಯರ‍್ಯಾರು ಇದ್ದಾರೆ ಎಂದು ವಿವರವಾಗಿ ತನಿಖೆ ನಡೆಸುವ ಅವಶ್ಯಕತೆ ಇದೆ. ಹೀಗಾಗಿ ಚಿನ್ನಯ್ಯನನ್ನು ವಶಕ್ಕೆ

(ಮೊದಲ ಪುಟದಿಂದ) ನೀಡಬೇಕು ಎಂದು ಎಸ್‌ಐಟಿ ಪರ ವಕೀಲರು ವಾದ ಮಂಡಿಸಿದ್ದರು.ನ್ಯಾಯಾಲಯವು ವಿನಂತಿಯನ್ನು ಪುರಸ್ಕರಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಸ್ಕ್ಮ್ಯಾನ್ ಚಿನ್ನಯ್ಯ ಯಾರು?

ಈ ಮಾಸ್ಕ್ಮ್ಯಾನ್ ಹಿನ್ನೆಲೆ ಏನು ಎಂಬದು ಪತ್ತೆಯಾಗಿದೆ. ಈತ ಮಂಡ್ಯದ ಚಿಕ್ಕಬಳ್ಳಿ ಗ್ರಾಮದವನು ಎಂದು ಬಯಲಾಗಿದೆ. ಈತನ ಮೊದಲ ಪತ್ನಿ ಇತ್ತೀಚೆಗೆ ಮಾಧ್ಯಮದ ಎದುರು ಬಂದು ಧರ್ಮಸ್ಥಳದಲ್ಲಿದ್ದಾಗ ಈತ ಹೇಳಿದಂತೆ ಯಾವುದೇ ಘಟನೆಗಳು ನಡೆದಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು. ಮದುವೆ ಬಳಿಕ ಧರ್ಮಸ್ಥಳದಲ್ಲಿ ೭ ವರ್ಷ ಇದ್ದೆವು ಎಂದಿದ್ದರು.

ಧರ್ಮಸ್ಥಳದಲ್ಲೇ ಈತನಿಗೆ ತಮಿಳುನಾಡು ಮೂಲದ ಮತ್ತೊಬ್ಬಳ ಪರಿಚಯವಾಗುತ್ತದೆ ಎಂದಿದ್ದರು. ಬಂಧಿತ ಮಾಸ್ಕ್ಮ್ಯಾನ್ ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಪಂಚಾಯಿತಿಯಲ್ಲಿಯೂ ಕೆಲಸ ಮಾಡುತ್ತಿದ್ದ. ಬಳಿಕ ಇಟ್ಟಿಗೆ ಫ್ಯಾಕ್ಟರಿಯಲ್ಲೂ ಕೆಲಸ ಮಾಡಿಕೊಂಡಿದ್ದ. ಕಳೆದ ೨೫ ವರ್ಷಗಳ ಹಿಂದೆ ಆತ ಧರ್ಮಸ್ಥಳಕ್ಕೆ ಹೋಗಿದ್ದ. ಅಲ್ಲಿ ಕಸಗುಡಿಸುವುದು, ಬಾತ್‌ರೂಂ ತೊಳೆಯುವ ಕೆಲಸ ಮಾಡಿಕೊಂಡಿದ್ದ. ಒಡವೆ ಸಂಬAಧÀ ಆರೋಪಕ್ಕಾಗಿ ಆತನನ್ನು ಧರ್ಮಸ್ಥಳದಿಂದ ಕಳುಹಿಸಿದ್ದರು ಎನ್ನಲಾಗಿದೆ. ಬಳಿಕ ಐದಾರು ವರ್ಷಗಳ ಹಿಂದೆ ಮತ್ತೆ ಗ್ರಾಮಕ್ಕೆ ಬಂದು ಆತ ಇದ್ದು ಹೋಗಿದ್ದ ಎಂದು ತಿಳಿದುಬಂದಿದೆ.

ತಮಿಳುನಾಡಿನಲ್ಲೂ ವಾಸ

ಈತ ಎರಡು ವರ್ಷ ತಮಿಳುನಾಡಿನ ಈರೋಡ್‌ನ ಚಿಕ್ಕರಸಿನಪಾಳ್ಯದಲ್ಲಿ ಇದ್ದಿದ್ದಾಗಿ ಹೇಳಿಕೆ ನೀಡಿದ್ದಾನೆ. ಬಳಿಕ ಮತ್ತೆ ಉಜಿರೆಗೆ ಬಂದು ಪಂಚಾಯತ್‌ನ ಸಫಾಯಿ ಕರ್ಮಚಾರಿ ಕೆಲಸಕ್ಕೆ ಸೇರಿದ್ದ. ಅಲ್ಲಿ ಕೆಲವು ಸ್ಥಳೀಯರ ಪರಿಚಯ ಆದ ಬಗ್ಗೆಯೂ ಮಾಹಿತಿ ನೀಡಿದ್ದಾನೆ.