ವೀರಾಜಪೇಟೆ, ಆ. ೨೩: ಬಿಲ್ಲವ ಸೇವಾ ಸಂಘದ ವತಿಯಿಂದ ಸೆ.೭ ರಂದು ಶ್ರೀ ನಾರಾಯಣ ಗುರು ೧೭೧ನೇ ಜಯಂತಿಯನ್ನು ಬಿಟ್ಟಂಗಾಲದ ಶ್ರೀ ನಾರಾಯಣ ಗುರು ಮಂದಿರದಲ್ಲಿ ಆಚರಿಸಲಾಗುವುದು ಎಂದು ವೀರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಬಿ.ಎಂ ಗಣೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಲ್ಲವ ಸೇವಾ ಸಮಾಜದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗು ಪಿಯುಸಿಯಲ್ಲಿ ಶೇ ೮೦ಕ್ಕಿಂತ ಹೆಚ್ಚಿನ ಅಂಕ ಪಡೆದ ಸದಸ್ಯರುಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಇದನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯನ್ನು ತಾ. ೩೦ ರೊಳಗೆ ೯೬೧೧೦೦೨೯೯೮, ೯೯೪೫೫೨೬೩೫೮ ಸಂಖ್ಯೆಯನ್ನು ಸಂಪರ್ಕಿಸಿ ನೀಡುವಂತೆ ಕೋರಿದರು.

ಗೋಷ್ಠಿಯಲ್ಲಿ ಸದಸ್ಯರಾದ ಬಿ.ಎನ್ ಕಿಶೋರ್, ಬಿ.ಎಲ್ ಹರೀಶ್, ಬಿ.ಎ ಸುರೇಶ್ ಉಪಸ್ಥಿತರಿದ್ದರು.