ಮಡಿಕೇರಿ, ಆ. ೨೩: ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರದ ವತಿಯಿಂದ ವಿಶ್ವ ಸಹೋದರತ್ವ ದಿನ ಹಾಗೂ ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ ೧೮ನೇ ಪುಣ್ಯಸ್ಮರಣೆ ಅಂಗವಾಗಿ ರ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ತಾ. ೨೫ ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ರ ತನಕ ನಗರದ ಬ್ರಹ್ಮಕುಮಾರೀಸ್ ಲೈಟ್ ಹೌಸ್ ಸಭಾಂಗಣದಲ್ಲಿ ಶಿಬಿರ ನಡೆಯಲಿದ್ದು, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಹಿರಿಯ ರಾಜಯೋಗ ಶಿಕ್ಷಕಿ ಜಿ. ಗಾಯಿತ್ರಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.