ಕೂಡಿಗೆ, ಆ. ೨೩ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರ ಹೋರಾಟ ಸಮಿತಿ ರಚನೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ಆನೆ ಮತ್ತು ಮಾನವ ಸಂಘರ್ಷ, ಕಾಡು ಪ್ರಾಣಿಗಳ ಉಪಟಳ ನಿಗ್ರಹ ಸಂಬAಧ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರೈತರು, ಬೆಳೆಗಾರರ ಸಭೆ ನಡೆಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ ಉಂಟಾಗುತ್ತಿರುವ ಅನಾಹುತಗಳು ಮತ್ತು ಬೆಳೆಹಾನಿ ತಡೆಗಟ್ಟಲು ಸೂಕ್ತ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ನೆರೆದಿದ್ದ ರೈತರು ಸಭೆಯಲ್ಲಿ ವನ್ಯಜೀವಿಗಳ ಉಪಟಳದ ಬಗ್ಗೆ ಗಂಭೀರ ಚರ್ಚೆ ನಡೆಸಿದರು. ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಹೋರಾಟ ರೂಪಿಸಲು ೧೧ ಮಂದಿ ಒಳಗೊಂಡ ಹೋರಾಟ ಸಮಿತಿ ರಚಿಸಲಾಯಿತು.
ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ಶಾಸಕರು, ಸಂಸದರು, ರೈತ ಮುಖಂಡರ ಗಮನ ಸೆಳೆದು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ಬಗ್ಗೆ ಸಭೆ ನಿರ್ಣಯ ಕೈಗೊಂಡಿತು.
ವನ್ಯಜೀವಿಗಳ ಉಪಟಳಕ್ಕೆ ಕಡಿವಾಣ ಹಾಕಲು ಕೋರಿ ಮೀನುಕೊಲ್ಲಿ ಶಾಖೆ ಉಪ ವಲಯ ಅರಣ್ಯಾಧಿಕಾರಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ, ಗ್ರಾಮದಲ್ಲಿ ಉಪಟಳ ನೀಡುತ್ತಿರುವ ಪುಂಡಾನೆಯೊAದನ್ನು ಕೂಡಲೆ ಸೆರೆ ಹಿಡಿಯಬೇಕಿದೆ. ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ, ಕಾಡು ಹಂದಿ, ಮುಳ್ಳುಹಂದಿ, ನವಿಲು, ಮಂಗ, ಕೆಂಜರಿಗಳ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಉಂಟಾಗುತ್ತಿದೆ. ಇವುಗಳ ನಡುವೆ ಹುಲಿ ಕಾಟ ಕೂಡ ಹೆಚ್ಚಾಗಿದೆ.
ಈ ಭಾಗದಲ್ಲಿ ಅಳವಡಿಸಿರುವ ರೈಲ್ವೇ ಬ್ಯಾರಿಕೇಡ್ ಅವೈಜ್ಞಾನಿಕ ವಾಗಿದೆ. ಸೋಲಾರ್ ಬೇಲಿ ನಿಷ್ಪçಯೋಜಕವಾಗಿದೆ ಎಂದು ಆರೋಪಿಸಿದರು. ಹಾನಿಗೊಳಗಾದ ಬೆಳೆಗಳಿಗೆ ನೀಡುವ ಪರಿಹಾರ ಮೊತ್ತ ಹೆಚ್ಚಿಸಬೇಕಿದೆ. ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟಬೇಕಿದೆ, ಸಮರ್ಪಕವಾದ ಆನೆ ಕಂದಕ ರಚಿಸಬೇಕಿದೆ, ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್ಗೆ ಸ್ಲೆöÊಡಿಂಗ್ ಗೇಟ್ ಅಳವಡಿಸಬೇಕಿದೆ. ಮುಂದಿನ ಒಂದು ತಿಂಗಳ ಒಳಗಾಗಿ ಈ ಎಲ್ಲಾ ಬೇಡಿಕೆಗಳಿಗೆ ಸೂಕ್ತವಾದ ಸ್ಪಂದನ ದೊರೆಯದಿದ್ದಲ್ಲಿ ಪಕ್ಷಾತೀತವಾಗಿ ಗ್ರಾಮಸ್ಥರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ರಕ್ಷಿತ್ ಮಾವಜಿ, ಕೆ.ವಿ. ಪ್ರೇಮಾನಂದ, ಮಾಜಿ ಸದಸ್ಯ ಸುಮೇಶ್ ಸೇರಿದಂತೆ ನೂರಾರು ರೈತರು, ಬೆಳೆಗಾರರು ಇದ್ದರು.
ಸಭೆಯ ನಂತರ ಸ್ಥಳೀಯ ಅರಣ್ಯಾಧಿಕಾರಿನವರ ಕಚೇರಿಗೆ ತೆರಳಿ ಮನವಿ ಪತ್ರವನ್ನು ನೀಡಲಾಯಿತು. ನಂತರ ಸಮರ್ಪಕವಾದ ಕ್ರಮವನ್ನು ಕೈಗೊಳ್ಳಲು ಒಂದು ತಿಂಗಳ ಗಡುವು, ನಂತರ ಕುಶಾಲನಗರದಲ್ಲಿ ನಂಜರಾಯಪಟ್ಟಣ, ರೈತರು ಬೆಳೆಗಾರರು, ಗ್ರಾಮಸ್ಥರ ಸಮ್ಮುಖದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದರು.