ಮಡಿಕೇರಿ ಆ. ೨೨: ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಈ ಅವಕಾಶ ಬಳಸಿಕೊಂಡು ಸ್ವಉದ್ಯೋಗ ಕೈಗೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದರು.
ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ(ಪಿಎಂಎಫ್ಎAಇ) ಯೋಜನೆ ಕುರಿತು ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆತ್ಮ ನಿರ್ಭರ ಭಾರತ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶವಿದೆ. ಆ ನಿಟ್ಟಿನಲ್ಲಿ ಸಾಲ ಸೌಲಭ್ಯ ಪಡೆದು ಮನೆಯಲ್ಲಿಯೇ ಸ್ವ ಉದ್ಯೋಗ ಕೈಗೊಳ್ಳಬಹುದಾಗಿದೆ. ಸರ್ಕಾರದಿಂದ ಶೇ.೫೦ ರಷ್ಟು ಸಹಾಯಧನ ದೊರೆಯಲಿದ್ದು, ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆಗಳ ಬೆಳವಣಿಗೆಗೆ ಈ ಯೋಜನೆ ಸಹಕಾರಿಯಾಗಿದೆ. ಈ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಮಾರುಕಟ್ಟೆ ಸೌಲಭ್ಯ ಒದಗಿಸಿ ಎಲ್ಲೆಡೆ ವ್ಯಾಪಾರ ಆಗುವಂತೆ ನೋಡಿಕೊಳ್ಳುವುದು ಅತೀ ಮುಖ್ಯವಾಗಿದೆ. ಉತ್ತಮ ಉತ್ಪನ್ನಕ್ಕೆ ಹೆಚ್ಚಿನ ಅವಕಾಶವಿದ್ದು, ಆ ನಿಟ್ಟಿನತ್ತ ಗಮನಹರಿಸಬೇಕಿದೆ ಎಂದರು.
ಕಿರು ಆಹಾರ ಸಂಸ್ಕರಣಾ ಉದ್ಯಮದಲ್ಲಿ ಮಹಿಳೆಯರು ಹೆಚ್ಚು ತೊಡಗಿಸಿಕೊಂಡು ಸ್ವ ಉದ್ಯೋಗ ಕೈಗೊಳ್ಳಬಹುದಾಗಿದೆ. ಇದರಿಂದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಾಣಿಜ್ಯ ಮತ್ತು ವ್ಯಾಪಾರವನ್ನು ಹೆಚ್ಚಿಸಲು ಸಾಧ್ಯವಾಗಲಿದೆ. ಜೊತೆಗೆ ಹಲವರಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ. ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಕಿರು ಆಹಾರ ಸಂಸ್ಕರಣೆಯನ್ನು ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ತಮಗೆ ಯಾವುದು ಅನುಕೂಲ ಅದನ್ನು ಕೈಗೊಂಡು ಯಶಸ್ಸು ಸಾಧಿಸುವತ್ತ ಮುನ್ನಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು, ಇದನ್ನು ಸರಿಯಾಗಿ ಬಳಸಿಕೊಂಡು ಹೆಚ್ಚಿನ ಉದ್ಯಮ ಸ್ಥಾಪನೆಗೆ ಮುಂದಾಗಬೇಕು. ಕಾಫಿ, ಕಾಳುಮೆಣಸು, ಏಲಕ್ಕಿ, ಕೋಕೋ, ಅಡಿಕೆ, ಜೇನು, ಭತ್ತ ಹೀಗೆ ಹಲವು ರೀತಿಯ ಕಿರು ಆಹಾರ ಸಂಸ್ಕರಣೆ ಉದ್ಯಮಕ್ಕೆ ಅವಕಾಶಗಳಿದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಸಹಾಯಧನ ಕಲ್ಪಿಸಲಾಗುತ್ತಿದ್ದು, ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಕೊಡಗು ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಕನಿಷ್ಠ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಬೇಕು. ಇಲ್ಲಿನ ಕಿರು ಆಹಾರ ಸಂಸ್ಕರಣಾ ಉದ್ಯಮ ಎಲ್ಲೆಡೆ ಫಸರಿಸಬೇಕು. ಆ ನಿಟ್ಟಿನಲ್ಲಿ ‘ಜಿಐ’ ಟ್ಯಾಗ್ ಸಹ ದೊರೆಯುವಂತಾಗಬೇಕು ಎಂದು ತಿಳಿಸಿದರು.
ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಹಿಟ್ಟಿನ ಗಿರಿಣಿ, ಎಣ್ಣೆ ಗಾಣಗಳು, ಬೇಕರಿ ಉತ್ಪನ್ನಗಳ ತಯಾರಿಕೆ, ಬಾಳೆಕಾಯಿ ಉತ್ಪನ್ನ, ಅರಿಸಿನ ಸಂಸ್ಕರಣ, ತೆಂಗಿನ ಕಾಯಿ ಉತ್ಪನ್ನ ತಯಾರಿಕೆ, ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ತಯಾರಿಕೆ, ಚಪಾತಿ, ಕಾಫಿ ಪುಡಿ, ಮಸಾಲ ಪದಾರ್ಥ, ಚಾಕೋಲೇಟ್, ಜೇನು ಸಂಸ್ಕರಣಾ ಘಟಕ, ಹಣ್ಣು ಮತ್ತು ತರಕಾರಿ ಉತ್ಪನ್ನಗಳ ಸಂಸ್ಕರಣೆ ಏಳನೇ ಪುಟಕ್ಕೆ ಈ ಘಟಕಗಳಿಗೆ ಅವಕಾಶವಿದೆ ಎಂದು ವಿವರಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧಕರ ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಸಲಹೆ ನೀಡಿದರು. ಸಿಎಫ್ಟಿಆರ್ಐನ ಹಿರಿಯ ತಾಂತ್ರಿಕ ಅಧಿಕಾರಿ ಡಾ.ರಾಘವೇಂದ್ರ ಅವರು ಜಿಲ್ಲೆಯಲ್ಲಿ ಮೌಲ್ಯವರ್ಧನೆ ಮತ್ತು ಸಂಸ್ಕರಣೆ ಅವಕಾಶಗಳ ಕುರಿತು ಮಾತನಾಡಿದರು.
ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ ಸಹಾಯಕ ಮಹಾ ಪ್ರಬಂಧಕ ರಮೇಶ್ ಬಾಬು, ಸಿರಿಧಾನ್ಯಗಳ ಉತ್ಪನ್ನಗಳ ಕುರಿತು ಅರ್ಚನಾ ಕೆ.ಎಂ., ನಮಿತಾ ಅಯ್ಯಪ್ಪ, ಸಾಂಬಾರ ಪದಾರ್ಥಗಳ ಕುರಿತು ದೇವಯ್ಯ ಪಿ.ವಿ., ಸಂಪನ್ಮೂಲ ವ್ಯಕ್ತಿಗಳಾದ ನೀರಜಾ ಕೆ.ಜಿ., ಕುಮುದ ಜಯಪ್ರಶಾಂತ್ ಅವರು ಮಾತನಾಡಿದರು.
ಕೃಷಿಕರಾದ ಕೋಡಿ ಪೊನ್ನಪ್ಪ, ನಾಪಂಡ ರ್ಯಾಲಿ ಮಾದಯ್ಯ, ಇತರರು ಇದ್ದರು. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಭಿತ್ತಿ ಪತ್ರವನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು. ಹಾಗೂ ಸಾಲ ಸೌಲಭ್ಯದ ಚೆಕ್ ಅನ್ನು ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಡಿ.ಎಸ್.ಸೋಮಶೇಖರ್ ಸ್ವಾಗತಿಸಿದರು, ಮೀನಾಕ್ಷಿ ಮತ್ತು ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಪರಮೇಶ್ ವಂದಿಸಿದರು.