ಸೋಮವಾರಪೇಟೆ, ಆ. ೨೨: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಆಚರಿಸುವ ಸದ್ಭಾವನಾ ದಿನ ಕಾರ್ಯಕ್ರಮ ಇಲ್ಲಿನ ತಾಲೂಕು ಕಚೇರಿಯಲ್ಲಿ ನಡೆಯಿತು.
ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು