ಕುಶಾಲನಗರ, ಸೆ. ೧: ಕಳೆದ ೯ ವರ್ಷಗಳ ಹಿಂದೆ ಆರಂಭಗೊAಡ ನಂ.೩೮೧೮೫ ನೇ ನಾಡಪ್ರಭು ಪತ್ತಿನ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಸಂಘದ ಲಾಭಾಂಶ ರೂ.೬೫. ಲಕ್ಷ ವೆಚ್ಚದಲ್ಲಿ ಕುಶಾಲನಗರದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದ್ದು,ಸೆ.೩ ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಹೇಳಿದರು.

ಸಂಘದ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದಲ್ಲಿ ೯೬೦ ಸದಸ್ಯರು ಇದ್ದು, ಎಲ್ಲರ ಸಹಕಾರದಿಂದ ಹಾಗೂ ಎಂ.ಡಿ.ನಾಗೇಶ್ ಮತ್ತು ಕುಟುಂಬಸ್ಥರು ದಾನ ನೀಡಿದ ನಿವೇಶನದಲ್ಲಿ ಸುಂದರವಾದ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ.

ಇಲ್ಲಿನ ಸಿದ್ದಯ್ಯಪುರಾಣಿಕ್ ಬಡಾವಣೆ ೪ನೇ ಹಂತ, ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಹತ್ತಿರ ನಿರ್ಮಾಣಗೊಂಡಿರುವ ಸಹಕಾರ ಸಂಘದ ನೂತನ ಕಟ್ಟಡ ಬುಧವಾರ ಬೆಳಿಗ್ಗೆ ೯.೩೦ ಗಂಟೆಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆಗಮಿಸಲಿದ್ದಾರೆ.

ನಂತರ ಬೆಳಿಗ್ಗೆ ೧೧ ಗಂಟೆಗೆ ಸ್ಥಳೀಯ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ವಹಿಸಲಿದ್ದಾರೆ.

ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹೆಚ್.ಎನ್.ರವೀಂದ್ರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಆರ್.ಶರವಣಕುಮಾರ್, ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಡಿ. ರಂಗಸ್ವಾಮಿ, ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಡಿ. ರವಿಕುಮಾರ್, ಸಹಾಯಕ ನಿಬಂಧಕರಾದ ಶೈಲಜಾ ಹಾಗೂ ನಿವೇಶನ ದಾನಿ ಎಂ.ಡಿ. ನಾಗೇಶ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಿ.ಬಿ.ಜಗದೀಶ್, ಸಂಸ್ಥಾಪಕ ಅಧ್ಯಕ್ಷ ಎಂ.ಡಿ.ರAಗಸ್ವಾಮಿ, ನಿರ್ದೇಶಕರಾದ ಸಿ.ವಿ. ನಾಗೇಶ್, ಎಂ.ಡಿ. ರವಿಕುಮಾರ್, ಕೆ.ಕೆ. ಹೇಮ್ ಕುಮಾರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೆ. ಸುನಿತಾ ಇದ್ದರು.