ಪೆರಂಬಾಡಿ ಕಡೆಯಿಂದ ವೀರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿAದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದ ಬದಿಯಲ್ಲಿ ಮಾತ್ರ ನಿಲ್ಲಿಸಬೇಕು.

ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೊಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್, ಬಾಳುಗೋಡು, ಬಿಟ್ಟಂಗಾಲ ಜಂಕ್ಷನ್, ಕೈಕೇರಿ ಜಂಕ್ಷನ್, ಗದ್ದೆ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ, ಸಿದ್ದಾಪುರಕ್ಕೆ ತೆರಳಬೇಕು. ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ, ಬಿಟ್ಟಂಗಾಲ. ಬಾಳುಗೋಡ, ಪೆರುಂಬಾಡಿ ಮಾರ್ಗವಾಗಿ ತೆರಳಬೇಕು. ಮಡಿಕೇರಿಯಿಂದ ಕೇರಳದ ಕಡೆ ಹೋಗುವ ವಾಹನಗಳು ಸಿದ್ದಾಪುರ, ಪಾಲಿಬೆಟ್ಟ, ಕೈಕೇರಿ, ಬಿಟ್ಟಂಗಾಲ, ಬಾಳುಗೋಡು, ಪೆರುಂಬಾಡಿ, ಮಾಕುಟ್ಟ ಮಾರ್ಗವಾಗಿ ಸಾಗಬೇಕು. ಮಡಿಕೇರಿ ಕಡೆಯಿಂದ ಮೈಸೂರು, ಬೆಂಗಳೂರಿಗೆ ಹೋಗುವ ವಾಹನಗಳು ಸಿದ್ದಾಪುರ ಮಾರ್ಗವಾಗಿ ಗೋಣಿಕೊಪ್ಪ, ಮೈಸೂರು, ಬೆಂಗಳೂರಿಗೆ ತೆರಳಬೇಕು.

ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವೀರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್ (ಡೆಂಟಲ್ ಕಾಲೇಜ್ ಜಂಕ್ಷನ್) ಮತ್ತು ರವಿರಾಜ್ ಗ್ಯಾಸ್ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನಿಲ್ಲಿಸಬೇಕು.

ಗೋಣಿಕೊಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನಗಳನ್ನು ಪಂಜರುಪೇಟೆಯ ಸರ್ವೋದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲುಗಡೆ ಮಾಡಬೇಕು. ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ನಿಲ್ಲಬೇಕು. ಮೈಸೂರು, ಬೆಂಗಳೂರು ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ, ಸಿದ್ದಾಪುರ ಮಾರ್ಗವಾಗಿ ಸಾಗಬೇಕು. ತಾ. ೬ ರಂದು ಮಧ್ಯಾಹ್ನ ೨ ಗಂಟೆಯಿAದ ತಾ.೭ರ ಬೆಳಿಗ್ಗೆ ೧೦ ಗಂಟೆಯವರೆಗೆ ವೀರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖ್ಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವೀರಾಜಪೇಟೆ ತಹಶೀಲ್ದಾರ್ ಕಚೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸರ್ವೋದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‌ನಿAದ ದಖ್ಖನಿ ಮೊಹಲ್ಲಾ ಜಂಕ್ಷನ್‌ವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ.