ಮಡಿಕೇರಿ, ಸೆ. ೫: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದರು. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗುರುಗಳಿಲ್ಲದಿದ್ದರೆ ಸಮಾಜದ ಸ್ಥಿತಿಗತಿಗಳು ಬೇರಡೆಯೇ ಸಾಗುತ್ತಿತ್ತು, ಗುರುವಿಂದಲೆ ಕೆಡಕುಗಳು ಮರೆಯಾಗಿ ಒಳಿತಾಗುತ್ತಿರುವುದು. ಆದುದರಿಂದಲೇ ಪ್ರತಿಯೊಬ್ಬರ ಜೀವನದಲ್ಲಿಯೂ ಗುರು ಮಹತ್ವ ಪೂರ್ಣವಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ದಾಖಲಾಗಲು ಶಾಲೆಗಳಲ್ಲಿ ಅನೇಕ ಬದಲಾವಣೆ ಹಾಗೂ ನೂತನ ಕಾರ್ಯಕ್ರಮಗಳನ್ನು ತರಲಾಗುತ್ತಿದೆ. ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಅದನ್ನು ಸರಿಪಡಿಸಿಕೊಡುವುದರ ಭರವಸೆಯನ್ನು ನೀಡಿದರು. ನಿವೃತ್ತರಾಗಿರುವ ಶಿಕ್ಷಕರಿಗೆ ಮತ್ತೆ ಪುನಹ ಅವಕಾಶ ಕಲ್ಪಿಸುವುದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.

ನಿವೃತ್ತಿ ಹೊಂದಿದವರು ಸಹ ಮತ್ತೆ ಅತಿಥಿ ಶಿಕ್ಷಕರಾಗಿ ಬೋಧಿಸಲು ಇಚ್ಛಿಸಿದರೆ ಅವರುಗಳಿಗೆ ಅವಕಾಶ ಕಲ್ಪಿಸುವುದರ ಕುರಿತು ಅಧಿಕಾರಿಗಳಿಗೆ ಸಲಹೆ ನೀಡಿದರು.ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮೈಸೂರಿನ ಉಪನ್ಯಾಸಕÀ ಎಸ್.ಪಿ. ನಾಗರಾಜು ಮಾತನಾಡಿ, ಮೊದಲು ಗುರುವನ್ನು ಪೂಜಿಸಿ ಗೌರವಿಸಬೇಕು, ನಂತರ ದೇವರನ್ನು ಪೂಜಿಸಬೇಕು, ಜೊತೆಗೆ ನಮಸ್ಕರಿಸಬೇಕು. ಏಕೆಂದರೆ ಗುರುವಿನಿಂದಲೇ ನಮಗೆ

ಪುಣ್ಯಲೋಕವು ಪ್ರಾಪ್ತಿಯಾಗುವುದು ಮತ್ತು ೪ಆರನೇ ¥ ಗುರುವಿನಿಂದಲೇ ನಮಗೆ ಮುಕ್ತಿಯು ದೊರೆಯುವುದು ಎಂದು ನುಡಿದರು. ಶಿಕ್ಷಕರು ಉರಿಯುವ ಮೇಣದ ಬತ್ತಿಯಂತೆ ತನ್ನನ್ನು ತಾನು ಸುಟ್ಟುಕೊಂಡು ಬೆಳಕು ನೀಡುವ ಮೇಣದಂತೆಯೇ ಶಿಕ್ಷಕರುಗಳು ಅಂತಹ ಮಹತ್ವ ಸ್ಥಾನ ಶಿಕ್ಷಕರುಗಳಿಗಿದೆ ಎಂದು ಅಭಿಪ್ರಾಯಪಟ್ಟರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್ ಮಾತನಾಡಿದರು. ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ವಿಜೇತರಾದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷÀ ಸದಾಶಿವಯ್ಯ ಪಲ್ಲೆದ್, ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ ದೈಹಿಕ ಶಿಕ್ಷಕರ ಸಂಘ ಅಧ್ಯಕ್ಷ ಪೂರ್ಣೇಶ್, ಜಿಲ್ಲಾ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ದೇವಕಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಮತ್ತಿತರರು ಇದ್ದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಸ್ವಾಗತಿಸಿದರು. ಮೋಹನ್ ಪೆರಾಜೆ ಹಾಗೂ ಮಂಜುಳಾ ಚಿತ್ರಪುರ ನಿರೂಪಿಸಿ, ಬಿಂದು ವಂದಿಸಿದರು.