ಮಡಿಕೇರಿ, ಸೆ. ೫; ಏಳನೇ ಹೊಸಕೋಟೆ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್, ಎಸ್ಎನ್ಡಿಪಿ ಶಾಖೆ, ವನಿತಾ ಹಾಗೂ ಯೂತ್ ಕಮಿಟಿ ಆಶ್ರಯದಲ್ಲಿ ತಾ.೭ರಂದು ಹೊಸಕೋಟೆಯಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜಯಂತಿ ಆಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಟಿ.ಕೆ.ಸಾಯಿಕುಮಾರ್ ಮಾತನಾಡಿ; ತಾ.೭ ರಂದು ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಬೆಳಿಗ್ಗೆ ೭ರಿಂದ ೮ಗಂಟೆವರೆಗೆ ಪೂಕಳಂ ಸ್ಪರ್ಧೆ, ೮.೩೦ಕ್ಕೆ ಧ್ವಜಾರೋಹಣ, ೯ರಿಂದ ಗುರು ಪೂಜೆ ನಡೆಯಲಿದೆ. ೯.೩೦ರಿಂದ ಮೆರವಣಿಗೆ ಆರಂಭವಾಗಲಿದ್ದು, ಅರಕಲಗೂಡು ಶಾಸಕ ಎ. ಮಂಜು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಮಧ್ಯಾಹ್ನ ಅನ್ನ ಸಂತರ್ಪಣೆ ಬಳಿಕ ಆಟೋಟ ಸ್ಪರ್ಧೆ ನಡೆಯಲಿದೆ. ಸಂಜೆ ೬ಗಂಟೆಯಿAದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ.ಮಂತರ್ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಇತರ ಪ್ರಮುಖರು ಭಾಗವಹಿಸಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಶಾಸಕ ಡಾ. ಮಂತರ್ ಗೌಡ ಉದ್ಘಾಟನೆ ಮಾಡಲಿದ್ದಾರೆ ಎಂದು ಸಾಯಿಕುಮಾರ್ ತಿಳಿಸಿದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಕೆ.ಜಿ.ಶಿವನ್, ಎಸ್ಎನ್ಡಿಪಿ ಅಧ್ಯಕ್ಷ ಟಿ.ಪಿ.ರಾಜೇಶ್. ವನಿತಾ ಕಮಿಟಿ ಅಧ್ಯಕ್ಷೆ ನಿರ್ಮಲ ಪ್ರಕಾಶ್ ಇದ್ದರು.