ಮಡಿಕೇರಿ ಸೆ. ೬: ಸಕಲೇಶಪುರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ಪ್ರಥಮ ಸ್ಥಾನ ಗಳಿಸಿದೆ. ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋದ ನೃತ್ಯ ಸಂಯೋಜಕ ಅಭಿಷೇಕ್ ಅವರು ನಿರ್ದೇಶಿಸಿದ್ದರು.

ಸಕಲೇಶಪುರದ ಶ್ರೀ ರಾಮದೂತ ಹಿಂದೂ ಮಹಾಗಣಪತಿ ಸಮಿತಿ ಹಾಗೂ ರೀದಮ್ ಕೀಪಜ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಸ್ಪರ್ಧಿಗಳು ಪಾಲ್ಗೊಂಡಿದ್ದರು.