*ಗೋಣಿಕೊಪ್ಪ, ಸೆ. ೬: ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಹುದಿಕೇರಿ ಗ್ರಾಮ ಪಂಚಾಯತ್‌ನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು, ಒಕ್ಕೂಟದ ಅಧ್ಯಕ್ಷರು, ಬಿಆರ್‌ಪಿ - ಪಿಆರ್‌ಐ, ಶಾಲೆಯ ಶಿಕ್ಷಕರು ಮತ್ತು ಮಕ್ಕಳು, ಅರಣ್ಯ ವಿದ್ಯಾಲಯದ ವಿದ್ಯಾರ್ಥಿಗಳು, ಎಂಬಿಕೆ, ಎಲ್‌ಸಿಆರ್‌ಪಿ, ಕೃಷಿ ಸಖಿ, ಪಶು ಸಖಿ ಹಾಗೂ ಒಕ್ಕೂಟದ ಸದಸ್ಯರು ಹಾಜರಿದ್ದರು.