ಕುಶಾಲನಗರ, ಸೆ. ೬: ಚೇಂಬರ್ ಆಫ್ ಕಾಮರ್ಸ್ ಮೂಲಕ ವರ್ತಕರಲ್ಲಿ ಒಗ್ಗಟ್ಟು ಮೂಡಿಸುವುದರೊಂದಿಗೆ ಸಣ್ಣ ವ್ಯಾಪಾರಿಗಳ ಏಳಿಗೆಗಾಗಿ ಶ್ರಮಿಸಬೇಕಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಕರೆ ನೀಡಿದರು.
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಆಶ್ರಯದಲ್ಲಿ ಕುಶಾಲನಗರ ಎಸ್‌ಎಲ್‌ಎನ್ ಟೈಮ್ ಸ್ಕ್ವಯರ್ ಆವರಣದಲ್ಲಿ ನಡೆದ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸ್ಥಳೀಯ ಹಣಕಾಸು ವ್ಯವಸ್ಥೆಗೆ ಶಕ್ತಿ ತುಂಬುವ ವ್ಯಾಪಾರಿಗಳ ಅಭಿವೃದ್ಧಿಗೆ ಸರಕಾರದ ಮೂಲಕ ಅಗತ್ಯ ಸಹಾಯ ಹಸ್ತ ಕಲ್ಪಿಸುವ ಭರವಸೆ ನೀಡಿದ ಶಾಸಕರು ಗ್ರಾಹಕರಿಗೆ ಗುಣಮಟ್ಟದ ವಸ್ತುಗಳನ್ನು ಪೂರೈಕೆ ಮಾಡುವಲ್ಲಿ ಪ್ರತಿಯೊಬ್ಬ ವರ್ತಕರು ಗಮನಹರಿಸಬೇಕು. ವ್ಯಾಪಾರಿಗಳ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಚೇಂಬರ್ ಆಫ್ ಕಾಮರ್ಸ್ ಸದಾ ಕಾರ್ಯ ನಿರ್ವಹಿಸುವಂತಾಗಬೇಕು ಎಂದು ಹೇಳಿದರು. ಮೇಳದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಂತರ್ ಗೌಡ ಪ್ರತಿ ವರ್ಷ ಹಬ್ಬದ ರೀತಿಯಲ್ಲಿ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತನೆ ಹರಿಸುವಂತೆ ಸಲಹೆಯಿತ್ತರು. ಕಾರ್ಯಕ್ರಮ ಉದ್ಘಾಟಿಸಿದÀ ಅದ್ವೆöÊತ್ ಹೋಂಡೈ ಮಾರುಕಟ್ಟೆ ವಿಭಾಗದ ನಿರ್ದೇಶಕ ಎಲ್.ಎನ್. ಅಜಯ್ ಸಿಂಗ್ ಮಾತನಾಡಿ, ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ವರ್ತಕರು ನಿರಂತರ ವ್ಯಾಪಾರ ವಹಿವಾಟು ಮಾಡುವಂತಾಗಲಿ ಎಂದು ಹೇಳಿದರು.
ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಎಸ್. ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಎಲ್ ಎನ್ ಗ್ರೂಪ್ ಮುಖ್ಯಸ್ಥ ವಿಶ್ವನಾಥನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್, ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಚೇಂಬರ್ ಆಫ್ ಕಾಮರ್ಸ್ ಕೊಡಗು ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಮಾಜಿ ಅಧ್ಯಕ್ಷ ಎಸ್.ಕೆ. ಸತೀಶ್, ಪ್ರಧಾನ ಕಾರ್ಯದರ್ಶಿ ಚಿತ್ರ ರಮೇಶ್, ನಿರ್ದೇಶಕರಾದ ರಂಗಸ್ವಾಮಿ ಉಪಸ್ಥಿತರಿದ್ದು ಮಾತನಾಡಿದರು.
ಸ್ಥಾನೀಯ ಸಮಿತಿಯ ಖಜಾಂಚಿ ಎನ್.ವಿ. ಬಾಬು ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರುಗಳು ಸದಸ್ಯರು ಇದ್ದರು.
ಮೇಳದಲ್ಲಿ ವಿವಿಧ ಕಂಪನಿಗಳ ದ್ವಿಚಕ್ರ ವಾಹನ, ಕಾರು ಮತ್ತಿತರ ವಾಹನಗಳ ಪ್ರದರ್ಶನ ಹಾಗೂ ಮಾರಾಟ ಸೇರಿದಂತೆ ವಿವಿಧ ರೀತಿಯ ನೂರಕ್ಕೂ ಅಧಿಕ ಮಳಿಗೆಗಳು ಗ್ರಾಹಕರನ್ನು ಆಕರ್ಷಿಸಿದವು. ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭ ಶಾಸಕರು ಸೇರಿದಂತೆ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಸಕ ಮಂತರ್ ಗೌಡ ಮತ್ತು ಗಣ್ಯರು ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವುದರೊಂದಿಗೆ ಕೆಲವು ನೂತನ ಕಾರುಗಳನ್ನು ಮೇಳದಲ್ಲಿ ಲೋಕಾರ್ಪಣೆಗೊಳಿಸಿದರು.
ಕುಶಾಲನಗರ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ವತಿಯಿಂದ ಪಟ್ಟಣದ ಎಸ್‌ಎಲ್‌ಎನ್ ಸ್ಕ÷್ವಯರ್ ಆವರಣದಲ್ಲಿ ನಡೆಯುತ್ತಿರುವ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಗ್ರಾಹಕರ ಒತ್ತಾಯದ ಮೇರೆಗೆ ಭಾನುವಾರ ಕೂಡ ಮುಂದುವರೆಯಲಿದೆ ಎಂದು ಚೇಂಬರ್ ಸ್ಥಾನೀಯ ಸಮಿತಿ ಅಧ್ಯಕ್ಷರಾದ ಕೆ.ಎ¸.ï ನಾಗೇಶ್ ತಿಳಿಸಿದ್ದಾರೆ.