ವೀರಾಜಪೇಟೆ, ಸೆ. ೬: ಕೈಲ್ ಪೊಳ್ದ್ ಅಂಗವಾಗಿ ವೀರಾಜಪೇಟೆ ಕೊಡವ ಸಮಾಜದ ವತಿಯಿಂದ ತಾ. ೨೭ ರಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನಾ ಸುಬ್ರಮಣಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಮತ್ತು ಪುರುಷರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಹಗ್ಗಜಗ್ಗಾಟ, ವಾಲಗತ್ತಾಟ್, ಭಾರದ ಗುಂಡು ಎಸೆತ ವಿವಿಧ ಪೈಪೋಟಿಗಳನ್ನು ನಡೆಸಲಾಗುವುದು. ಬೆಳಿಗ್ಗೆ ೯.೩೦ ನಡೆಯುವ ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಮರಣನಿಧಿ ಕಾರ್ಯದರ್ಶಿ ಮಾದೆಯಂಡ ಸಂಪಿ ಪೂಣಚ್ಚ ಉಪಸ್ಥಿತರಿದ್ದರು.