ಮಡಿಕೇರಿ ಸೆ. ೬: ದಸರಾ ಆಚರಣೆಯ ಸಂದರ್ಭ ಮಳೆಗೆ ವಿರಾಮ ನೀಡಬೇಕು ಮತ್ತು ದಸರಾ ಜನೋತ್ಸವ ನಿರ್ವಿಘ್ನವಾಗಿ ನಡೆಯಬೇಕೆಂದು ಪಾಡಿ ಶ್ರೀ ಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಮಡಿಕೇರಿ ದಸರಾ ದಶಮಂಟಪ ಸಮಿತಿ ವತಿಯಿಂದ ತಾ. ೭ ರಂದು (ಇಂದು) ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ತಿಳಿಸಿದ್ದಾರೆ.
ನಗರದಲ್ಲಿ ದಶಮಂಟಪ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಸರಾ ಸಂದರ್ಭ ಮಳೆ ಇಲ್ಲದೆ ಸಂಭ್ರಮದಿAದ ಹಬ್ಬ ಆಚರಣೆಯಾಗಬೇಕೆಂದು ಪಾಡಿ ಶ್ರೀ ಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ದಶಮಂಟಪಗಳ ಅದ್ದೂರಿ ಶೋಭಾಯಾತ್ರೆಗೆ ಸರ್ವರು ಸಹಕರಿಸುವಂತೆ ಕೋರಿದರು.
ಸನ್ಮಾನ : ಇದೇ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕÀ ಡಾ.ಮಂತರ್ ಗೌಡ, ದಶಮಂಟಪ ಸಮಿತಿಗಳ ಹಿರಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಸಂಚಾರಕ್ಕಾಗಿ ಶ್ರಮಿಸುತ್ತಿರುವ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.