*ಗೋಣಿಕೊಪ್ಪ, ಸೆ. ೬: ಹಾತೂರು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಾಲಕರ ಕಬಡ್ಡಿ ಮತ್ತು ರಿಲೇ ಓಟ, ಬಾಲಕಿಯರ ಖೋಖೊ ಮತ್ತು ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ.
ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮೇಲುಸ್ತುವಾರಿ ಸಮಿತಿ ಮತ್ತು ಸಹ ಶಿಕ್ಷಕರು ಗೌರವಿದರು ಎಂದು ಮುಖ್ಯ ಶಿಕ್ಷಕಿ ಮಾಲಿನಿ ಮಾಹಿತಿ ನೀಡಿದ್ದಾರೆ.