ಚೆಟ್ಟಳ್ಳಿ, ಸೆ. ೬: ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ೨೦೨೫ -೨೬ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಿತು.
ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆಯಾದ ಕಾರ್ಯದರ್ಶಿ ಚೈತ್ರ, ಜಂಟಿ ಕಾರ್ಯದರ್ಶಿ ಆದಿತ್ಯ ಕುಮಾರಿ ಕಾವ್ಯ, ಕ್ರೀಡಾ ಕಾರ್ಯದರ್ಶಿ ಪುನೀತ್, ಸಾಂಸ್ಕೃತಿಕ ಕಾರ್ಯದರ್ಶಿ ಅಮೂಲ್ಯ ಹಾಗೂ ತರಗತಿ ಪ್ರತಿನಿಧಿಗಳಿಗೆ ಪದಗ್ರಹಣವನ್ನು ನೀಡಿ ಪ್ರತಿಜ್ಞಾವಿಧಿ ಬೋಧಿಸಿದರು.
ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎನ್. ಎಂ. ನಾಣಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಕೆ.ಪಿ. ಗಾಯತ್ರಿ, ಪದವಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಸಾಲ್ಡಾನ, ಪದವಿ ಪೂರ್ವ ಹಾಗೂ ಪದವಿ ಸರ್ವ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಎಸ್. ಹರ್ಷ, ಆಫ್ಲ ಫಾತಿಮಾ, ವಿ. ಎಂ. ಶಮ್ಲಾ ಅವರನ್ನು ಸನ್ಮಾನಿಸಲಾಯಿತು. ಕಾವ್ಯ ಮತ್ತು ತಂಡದವರು ಪ್ರಾರ್ಥಿಸಿ, ಎನ್.ಎಂ. ನಾಣಯ್ಯ ಸ್ವಾಗತಿಸಿದರು. ಡೈನಾ ಸೋಮಯ್ಯ ವಂದಿಸಿದರು. ಅನುಪಮಾ ತಿಮ್ಮಯ್ಯ, ಫರೀದಾ ಹಾಗೂ ಡೋನ ನಿರೂಪಿಸಿದರು.