ವೀರಾಜಪೇಟೆ, ಸೆ. ೬: ನ್ಯೂನ್ಯತೆಯನ್ನು ಮರೆತು ಸಾಧನೆ ಮಾಡುವತ್ತ ದಿಟ್ಟ ಹೆಜ್ಜೆ ಇಡಬೇಕೆಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು. ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಶಾಸಕರ ನಿಧಿಯಿಂದ ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು, ಸ್ವಾವಲಂಬಿಗಳಾಗುವ ನಿಟ್ಟಿನಲ್ಲಿ ವಿಶೇಷಚೇತನರಿಗೆ ಈ ಸೌಲಭ್ಯ ಒದಗಿಸಿದ್ದು, ಇದನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪುರಸಭೆ ಸದಸ್ಯರಾದ ರಜಿನಿಕಾಂತ್, ಮಹಮ್ಮದ್ ರಾಫಿ, ಪಕ್ಷದ ಪ್ರಮುಖರು ಜೋಕಿಂ, ಕುಂಡಚೀರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಮಹದೇವ, ಆಯಿಷಾ ಸೇರಿದಂತೆ ಅಧಿಕಾರಿಗಳು, ಫಲಾನುಭವಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.