ಗೋಣಿಕೊಪ್ಪಲು, ಸೆ. ೬: ಶಿಕ್ಷಕರು ಸಮಾಜದ ದೀಪವಿದ್ದಂತೆ, ಸಮಾಜ ವನ್ನು ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಹೇಳಿದರು.
ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ವೀರಾಜಪೇಟೆ ತಾಲೂಕು, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪಲಿನ ಕಾಪ್ಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಆಚರಣಾ ಸಮಿತಿ ವತಿಯಿಂದ ಆಯೋಜನೆಗೊಂಡಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ೪ಏಳನೇ ಪ (ಮೊದಲ ಪುಟದಿಂದ) ಅವರು ಮಾತನಾಡಿದರು. ದೇಶದಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರಿಂದ ಪ್ರಜ್ಞಾವಂತ ನಾಗರಿಕ ಸಮಾಜ ನಿರ್ಮಾಣವಾಗುತ್ತಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಭಾರತ ದೇಶದಲ್ಲಿ ಗುರುಗಳಿಗೆ ಅಗ್ರಸ್ಥಾನವಿದೆ. ವಿದ್ಯಾರ್ಥಿಯನ್ನು ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿ ರೂಪಿಸಲು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಗ್ಯಾರಂಟಿ ಅನುಷ್ಠಾನ ಸಮಿತಿಯ ವೀರಾಜಪೇಟೆ ತಾಲೂಕು ಅಧ್ಯಕ್ಷ ಪಿ.ವಿ. ಜಾನ್ಸನ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ್, ಪ್ರಧಾನ ಭಾಷಣಕಾರ ಹೆಚ್.ಎಂ. ಪ್ರಥ್ವಿರಾಜ್ ಸೇರಿದಂತೆ ಇನ್ನಿತರ ಗಣ್ಯರು ಮಾತನಾಡಿದರು. ವೇದಿಕೆಯಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಬಿ. ನಮಿತಾ, ಕಾರ್ಯಕ್ರಮದ ಸಂಚಾಲಕ, ಶಿಕ್ಷಕರ ಕಲ್ಯಾಣ ಸಮಿತಿಯ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ್, ಸಹಾಯಕ ನಿರ್ದೇಶಕ ಕೆ.ಆರ್. ರಾಜೇಶ್, ಕಾಪ್ಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ. ಎಂ. ರಾಮಚಂದ್ರನ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ. ಮಹೇಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ನಿವೃತ್ತ ಶಿಕ್ಷಕರುಗಳನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರಾಗಿ ಆಯ್ಕೆಗೊಂಡ ಶಿಕ್ಷಕರನ್ನು ಗಣ್ಯರು ಸನ್ಮಾನಿಸಿ, ಗೌರವಿಸಿದರು. ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಪ್ರಮುಖರುಗಳಾದ ಕೆ.ಎಂ. ತಿಮ್ಮಯ್ಯ, ಈ. ಸುರೇಂದ್ರ, ಡಿ. ಕೃಷ್ಣಚೈತನ್ಯ, ಬಿ.ಪಿ. ಉತ್ತಪ್ಪ, ಜಿ. ಗಿಡ್ಡಯ್ಯ, ಡಾ. ಸಿ.ಎಂ. ಸೋಮಯ್ಯ, ಎನ್.ಎಸ್. ಬಸವರಾಜು, ಎನ್.ಎಸ್. ವಿಜಯಕುಮಾರ್, ಪಿ.ಎ. ಪ್ರವೀಣ್, ಎಂ.ಎಸ್.ತಮ್ಮಯ್ಯ, ಶಫಿಉಲ್ಲಾ ಷರೀಫ್, ಪಿ.ಸಿ. ಪೂವಮ್ಮ ಭಾಗವಹಿಸಿದ್ದರು.
ವಿಶೇಷ ಆಹ್ವಾನಿತರಾಗಿ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಹೆಚ್.ಎಸ್. ಚೇತನ್, ಎಂ.ಸಿ. ಅರುಣ್‌ಕುಮಾರ್, ಕೆ.ಎಸ್. ಪ್ರಸನ್ನಕುಮಾರ್ ಹೆಚ್.ಕೆ. ಕುಮಾರ್, ಹೆಚ್.ಜಿ. ಕುಮಾರ್, ಹ್ಯಾರಿಮೋರಸ್, ಕೆ. ಝರು ಗಣಪತಿ, ಪಿ.ಎ. ಪ್ರಭುಕುಮಾರ್, ಹೆಚ್.ಎಂ. ಪಾರ್ವತಿ, ಜಿ.ಸಿ. ಶರತ್ ಕುಮಾರ್, ಸಿ.ಎಂ. ಸೋಮಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. ಶಿಕ್ಷಕರಾದ ಚಂದನ ಮಂಜುನಾಥ್, ಓಮನ ನಿರೂಪಿಸಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ. ಮಹೇಶ್ ಸ್ವಾಗತಿಸಿ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಸಹಾಯಕ ನಿರ್ದೇಶಕ ಕೆ.ಆರ್. ರಾಜೇಶ್ ವಂದಿಸಿದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.