ಮಡಿಕೇರಿ, ಸೆ. ೭: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೫-೨೬ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‌ಲೈನ್ ತಂತ್ರಾAಶದಡಿ ಅಳವಡಿಸಲಾಗಿರುತ್ತದೆ.
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆ ಹಾಗೂ ಸಾಧನ ಸಲಕರಣೆ ಯೋಜನೆ ಈ ಯೋಜನೆಗಳಿಗೆ ೨೦೨೫-೨೬ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ (hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಏಚಿಟಿಟಿಚಿಜಚಿ) ಪೋರ್ಟ್ಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್. ಮೊ. ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ. ಮೊ. ೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ. ೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.