ಮಡಿಕೇರಿ, ಸೆ. ೬: ಭಾಗಮಂಡಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೦೦೭ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವು ನೆರವೇರಿತು.

ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊAಡು, ಶಾಲೆಯ ಅಭಿವೃದ್ಧಿಗೆ ತಾವು ಸಹಕರಿಸುತ್ತೇವೆ ಎಂಬ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಶಾಲೆಯ ಪ್ರಸ್ತುತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ೨೦೦೭ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗೆ ಪ್ರೊಜೆಕ್ಟರ್ ಹಾಗೂ ಪ್ಲೇಟ್‌ಗಳನ್ನು ವಿತರಣೆ ಮಾಡಲಾಯಿತು. ಶಾಲೆಯ ಅಭಿವೃದ್ಧಿಗೆ ವಿದ್ಯಾರ್ಥಿಗಳು ನೀಡಿದ ಸಹಕಾರಕ್ಕೆ ಶ್ಲಾಘನೆ ವ್ಯಕ್ತವಾಯಿತು.