ಮಡಿಕೇರಿ, ಸೆ. ೭; ಐರಿ ಸಮಾಜದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಕೈಲ್ಪೋಳ್ದ್ ಒತ್ತೋರ್ಮೆ ಕೂಟ ಅಕ್ಟೋಬರ್ ೧೨ ರಂದು ಅರಮೇರಿ ಗ್ರಾಮದಲ್ಲಿರುವ ಐರಿ ಸಮಾಜದ ನಿವೇಶನದಲ್ಲಿ ನಡೆಯಲಿದೆ ಎಂದು ಐರಿ ಸಮಾಜದ ಕಾರ್ಯದರ್ಶಿ ಕಾಮೆಯಂಡ ಗಣೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವಾರ್ಷಿಕ ವರದಿ ಮಂಡನೆ, ಲೆಕ್ಕಪತ್ರ ಮಂಡನೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ.
ಮಹಾಸಭೆಯ ಬಳಿಕ ಐರಿ ಜನಾಂಗದವರಿಗಾಗಿ ಕೈಲ್ಪೋಳ್ದ್ ಒತ್ತೋರ್ಮೆ ಕೂಟ ಆಯೋಜಿಸಲಾಗಿದ್ದು, ಇದರಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಕೂಡ ಆಯೋಜಿಸಲಾಗಿದ್ದು, ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳಿಗಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.