ಮಡಿಕೇರಿ ಸೆ. ೭: ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆ ತಾ. ೧೧ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ೧೨.೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಭೆ ತಾ. ೧೧ ರಂದು ಮಧ್ಯಾಹ್ನ ೨.೩೦ ಗಂಟೆಯಿAದ ೩.೩೦ ಗಂಟೆವರೆಗೆ ವೀರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ, ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ಸಭೆ ತಾ. ೧೨ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ೧೨.೩೦ ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ, ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ಸಭೆ ತಾ. ೧೨ ರಂದು ಮಧ್ಯಾಹ್ನ ೦೨.೩೦ ಗಂಟೆಯಿAದ ೩.೩೦ ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ, ಗೋಣಿಕೊಪ್ಪ, ವೀರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.