ನಾಪೋಕ್ಲು, ಸೆ. ೬: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ದೊರೆತಿದೆ.

೨೦೨೪-೨೫ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಸಂಘಕ್ಕೆ ಪ್ರಥಮ ಸ್ಥಾನ ದೊರೆತಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಕೊಡಂದೆರ ಗಣಪತಿ ಅವರಿಂದ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಅಶೋಕ ಪಿ.ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.